ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೊಡಗು ಜಿಲ್ಲೆಯಾದ್ಯಂತ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದ್ದು ಮಡಿಕೇರಿ ತಲಕಾವೇರಿ ಭಾಗಮಂಡಲ ಸೇರಿದಂತೆ ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ.ಕೊಡಗಿನಲ್ಲಿ ಕಾಲೇಜು, ಅಂಗನವಾಡಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೂಪ್ಪ ಹಾಗು ಎನ್.ಆರ್ ಪುರ ತಾಲೂಕಿನ ಅಂಗನವಾಡಿಗಳೀಗೆ ಇಂದಿನಿಂದ 28 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ ಸೇರಿ ಹಲವೆಡೆ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸುಗೊಂಡಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಲಾಗಿದೆ. ದ ಕ ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರೀ ಗಾಳಿ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಇದುವರೆಗೆ 7 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ. ಒಟ್ಟು 237 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು, 2 ಟ್ರಾನ್ಸ್‌ಫಾರ್ಮರ್‌ಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…