ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 23 ಸಾವಿರದ 775 ಆಗಿದ್ದು ಜಲಾಶಯದ ಇಂದಿನ ಹೊರಹರಿವು 25 ಸಾವಿರ ಕ್ಯೂಸೆಕ್ ಆಗಿದೆ. ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಕಬಿನಿ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಲಿದ್ದು, ಯಾವುದೇ ಕ್ಷಣದಲ್ಲಾದರೂ ಜಲಾಶಯದಿಂದ ಕಪಿಲಾ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel