ಮಹಾರಾಷ್ಟ್ರದ ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ | ಕೃಷ್ಣಾನದಿ ತೀರದ ಗ್ರಾಮಗಳ ಜನರಿಗೆ ಎಚ್ಚರಿಕೆ |

August 2, 2024
11:42 AM

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ  ಬೆಳಗಾವಿ ಜಿಲ್ಲೆಯ ಕೃಷ್ಣಾ  ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ‌ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.

ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.

ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror