ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.
ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.
ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…