ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕಾಗಿ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯ ಬಹುತೇಕ ನದಿಗಳು ಉಕ್ಕಿಹರಿಯುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಮನವಿ ಮಾಡಲಾಗಿದೆ.
ಕೊಯ್ನಾ ಡ್ಯಾಮ್ ನಿಂದ ಇಂದು 42,100 ಕ್ಯೂಸೆಕ್, ರಾಜಾಪುರ್ ಬ್ಯಾರೇಜ್ ನಿಂದ ಎರಡು ಲಕ್ಷ 44,ಸಾವಿರದ 757, ಕ್ಯೂಸೆಕ್ – ದೂಧಗಂಗಾ ನದಿಯಿಂದ 45,050 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಒಟ್ಟು ಚಿಕ್ಕೋಡಿಯ ಕಲ್ಲೋಳ ಬ್ಯಾರೇಜ್ ಹತ್ತಿರ ಎರಡು ಲಕ್ಷ 89 ಸಾವಿರ 807 ಕ್ಯೂಸೆಕ್ ಹರಿವಿನ ಪ್ರಮಾಣ ದಾಖಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ಎರಡು ಲಕ್ಷ 90 ಸಾವಿರದ 947 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ. ಕೃಷ್ಣಾ ನದಿ ತೀರದಲ್ಲಿ ಇರುವ ತಾಲೂಕುಗಳಾದ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಭಾಗ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿಯ ಆತಂಕ ಎದುರಾಗಿದೆ. ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ. ಕೆಲವು ಕಡೆ ಕಾಳಜಿ ಕೇಂದ್ರಗಳನ್ನೂ ತೆರೆಯಲಾಗಿದೆ.
ರಾಯಬಾಗ ತಾಲೂಕಿನ ಮಾಂಜರಿ-ಸವದತ್ತಿ ಹಾಲಳ್ಳಿ-ಚಿಂಚಲಿ ಗ್ರಾಮಗಳ ಜನರು ಪರ್ಯಾಯ ಮಾರ್ಗಗಳಿಂದ ಸಂಚರಿಸುತ್ತಿದ್ದಾರೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವದಕ್ಕೆ ಹಿಂದೇಟು ಹಾಕಬೇಡಿ ಎಂದು ಮನವಿ ಮಾಡಲಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…