ಕಲಬುರ್ಗಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಣ್ಣೆತೊರ ನದಿ ತುಂಬಿ ಹರಿಯುತ್ತಿದ್ದು ಕಾಳಗಿ ಹಾಗೂ ಚಿತ್ತಾಪುರ ತಾಲೂಕಿನ ನದಿ ಪಾತ್ರದ ಹಲವು ಗ್ರಾಮಗಳಿಗೆ ನೀರು ನುಗ್ಗಿದೆ. ಸರ್ಕಾರಿ ಶಾಲೆಗಳು, ಸಮುದಾಯ ಭವನಗಳು ಸೇರಿದಂತೆ ದೇವಸ್ಥಾನಗಳನ್ನು ಕಾಳಜಿ ಕೇಂದ್ರಗಳನ್ನಾಗಿ ಮಾಡಿ ಪ್ರವಾಹ ಪೀಡಿತ ಗ್ರಾಮಗಳ ಜನರನ್ನು ಸುರಕ್ಷಿತವಾಗಿ ಅಲ್ಲಿಗೆ ಸ್ಥಳಾಂತರಿಸಲಾಗಿದೆ.
ಕರ್ನಾಟಕದಾದ್ಯಂತ ಮತ್ತೆ ಮಳೆ ಶುರುವಾಗಿದೆ. 20 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 7 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರ ಬಳಿಕ ಭಾರಿ ಮಳೆಯಾಗಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…