ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

August 20, 2025
7:00 AM

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಚಿಕ್ಕಮಗಳೂರು, ಹಾಸನ, ದಾವಣಗೆರೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಹಾರಾಷ್ಟ್ರದ ಕೃಷ್ಣಾಕೊಳ್ಳದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕೃಷ್ಣಾ ನದಿಯಿಂದ ಹಾಗೂ ಘಟಪ್ರಭಾ ನದಿಯಿಂದ ಅಪಾರ ಪ್ರಮಾಣದ ನೀರನ್ನು ಬಿಡಲಾಗುತ್ತದೆ, ಇದರಿಂದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಅಣೆಕಟ್ಟಿನ ಒಳಹರಿವೂ ಹೆಚ್ಚಾಗಿದೆ. ಆಲಮಟ್ಟಿ ಅಣೆಕಟ್ಟೆಯ ಕೆಳಭಾಗದಲ್ಲಿರುವ ಜನರು ಎಚ್ಚರ ವಹಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ವಾಯುಭಾರ ಕುಸಿತದಿಂದಾಗಿ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ 3-4  ದಿನಗಳವರೆಗೆ ಸುರಿಯಲಿದೆ. ಧಾರವಾಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಕಳೆದ 24  ಗಂಟೆಯಲ್ಲಿ ಶೇಕಡ 519 ರಷ್ಟು ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು  ಹೇಳಿದ್ದಾರೆ.  ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಲಘಟಗಿ, ಧಾರವಾಡ, ನವಲಗುಂದ, ಅಣ್ಣಿಗೇರಿ ಮತ್ತು ಕುಂದಗೋಳ ತಾಲೂಕುಗಳಲ್ಲಿ ಜಾಸ್ತಿ ಪ್ರಮಾಣದಲ್ಲಿ ಮಳೆಯಾಗಿದೆ. ಬೆಳೆ ಹಾನಿ ಉಂಟಾದರೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ WhatsApp Channel   ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror