ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

April 11, 2024
8:54 PM
ರಾಜ್ಯದ ವಿವಿಧ ಕಡೆಗಳಲ್ಲಿ ಮಳೆಯಾಗಿದೆ.

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

Advertisement
Advertisement
ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ.  ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement
  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ
April 29, 2024
11:12 PM
by: ದ ರೂರಲ್ ಮಿರರ್.ಕಾಂ
ಕೋವಿ ಠೇವಣಾತಿ | ಕೃಷಿ ರಕ್ಷಣೆಗಾಗಿ ಕೋವಿ ಹಿಂಪಡೆಯಲು ಆದೇಶ |
April 29, 2024
6:36 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ
ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |
April 29, 2024
3:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror