ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.
ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…