Advertisement
MIRROR FOCUS

ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ | ಬಿಸಿಲಿನಿಂದ ಕಂಗೆಟ್ಟ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂತಸ

Share

ಬಿಸಿಲಿನ ತಾಪ(Temperature) ದಿನದಿಂದ ದಿನಕ್ಕೆ ಏರುತ್ತಿದೆ. ಭೂಮಿ(Earth) ಕಾದ ಕಾವಲಿಯಂತಾಗಿದೆ. ಬಿರು ಬಿಸಿಲಿಗೆ ಜನ ಬಸವಳಿದಿದ್ದಾರೆ. ಪ್ರಾಣಿ ಪಕ್ಷಿಗಳು ನೀರು ಆಹಾರಕ್ಕಾಗಿ ಪರದಾಡುವಂತಾಗಿದೆ. ವರುಣನ ಕೃಪೆಗಾಗಿ ಜನ ಕಾಯುತ್ತಿದ್ದಾರೆ. ಈ ಮಧ್ಯೆ ತೀವ್ರ ಬೇಸಿಗೆಯ ನಡುವೆಯೂ, ಹಲವು ಜಿಲ್ಲೆಗಳಲ್ಲಿ ವರುಣ (Rain) ತಂಪೆರೆದಿದ್ದಾನೆ. ಶಿವಮೊಗ್ಗ (Shivamogga), ಮಡಿಕೇರಿ (Madikeri), ಚಿಕ್ಕಮಗಳೂರು (Chikkamagaluru), ವಿಜಯಪುರ ಸೇರಿದಂತೆ ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಿದೆ.

ಕೊಡಗಿನ ಹಲವೆಡೆ ಹಗುರ ಮಳೆಯಾಗಿದೆ. ಜಿಲ್ಲೆಯ ವಿರಾಜಪೇಟೆಯ ಹಲವಾರು ಗ್ರಾಮೀಣ ಭಾಗಗಳಲ್ಲಿ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ತತ್ತರಿಸಿದ ಜನಕ್ಕೆ ಮಳೆರಾಯ ತಂಪೆರೆದಿದ್ದಾನೆ. ಕಳೆದ ಒಂದುವಾರದಿಂದ ಕೊಡಗಿನ ಗ್ರಾಮೀಣ ಭಾಗಗಳಲ್ಲಿ ಸಂಜೆಯ ವೇಳೆ ಮಳೆಯಾಗುತ್ತಿದೆ. ಇನ್ನೂ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ ಬಿದ್ದಿದ್ದು ಬಿಸಿಲಿನಿಂದ ಬಸವಳಿದ ಜನಕ್ಕೆ, ವರುಣ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಚಿಕ್ಕಮಗಳೂರಿನ, ಬಾಳೆಹೊನ್ನೂರು, ಎನ್‍ಆರ್‍ಪುರ, ಆವುತಿ, ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಮಳೆಯಿಂದ ರೈತರು ಹಾಗೂ ಕಾಫಿ ಬೆಳೆಗಾರರಲ್ಲಿ ಸಂಭ್ರಮ ಮನೆಮಾಡಿದೆ.

ವಿಜಯಪುರ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ವಿಜಯಪುರ ನಗರ, ತಿಕೋಟ ತಾಲೂಕಿನ ಘೋಣಸಗಿ, ಬಾಬಾನಗರ, ಹುಬನೂರು, ಸೋಮದೇವರಹಟ್ಟಿ, ಬಿಜ್ಜರಗಿ, ಕಳ್ಳಕವಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಲವಡೆ ಜೋರು ಮಳೆಯಾಗಿದೆ. ಕಲಬುರಗಿ ನಗರ ಸೇರಿ ಜಿಲ್ಲೆಯ ಹಲವಡೆ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

4 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

9 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago