ರಾಷ್ಟ್ರೀಯ ಹೆದ್ದಾರಿ ಆಗುಂಬೆ ಘಾಟಿಯಲ್ಲಿ ನಿರಂತರ ಮಳೆ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಪಕ್ಕ ಭೂಕುಸಿತ ಆಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…