ಸುಳ್ಯದ ಈ ಮಹಿಳೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರು ಕ್ಯಾನ್ಸರ್ ರೋಗಕ್ಕೆ ಒಳಗಾಗಿದ್ದಾರೆ. ಹೀಗಾಗಿ ಚಿಕಿತ್ಸೆಗೆ ಹೆಚ್ಚಿನ ಪ್ರಮಾಣದ ಹಣ ಬೇಕಾಗಿದೆ. ಬಡಕುಟುಂಬಕ್ಕೆ ಈಗ ಆರ್ಥಿಕ ನೆರವು ಅಗತ್ಯವಿದೆ.
ಸುಳ್ಯದ ಆಲೆಟ್ಟಿ ಗ್ರಾಮದ ಅರಂಬೂರು ಅಂಜೆಕಾರ್ ನಿವಾಸಿಯಾಗಿರುವ ಕಮಲ ಎಂಬವರು ತಮ್ಮ ಸಹೋದರನ ಜೊತೆ ಬದುಕು ಸಾಗಿಸುತ್ತಿದ್ದಾರೆ. ಬೀಡಿ ಕಟ್ಟಿ ಬದುಕು ಸಾಗಿಸುತ್ತಿದ್ದ ಇವರಿಗೆ ಈಚೆಗೆ ಕ್ಯಾನ್ಸರ್ ರೋಗ ಪತ್ತೆಯಾಗಿತ್ತು. ಇದಕ್ಕಾಗಿ ಈಗಾಗಲೇ ಚಿಕಿತ್ಸೆ ಮಾಡಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಡಾ.ಕಿಶನ್ ರಾವ್ ಬಾಳಿಲ ನೇತೃತ್ವದ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಮಾನವೀಯ ನೆಲೆಯಲ್ಲಿ ವೈದ್ಯರ ತಂಡವೇ ಅಲ್ಪಪ್ರಮಾಣ ವೆಚ್ಚಗಳನ್ನು ಭರಿಸಿ ಚಿಕಿತ್ಸೆ ನೀಡಿದ್ದಾರೆ. ಇದೀಗ ಮುಂದಿನ ಚಿಕಿತ್ಸೆಗೆ ಹಣಕಾಸಿನ ಅಗತ್ಯ ಇದೆ. ಸರ್ಕಾರದ ಯೋಜನೆಗಳ ಬಳಕೆ ನಂತರವೂ ಇತರ ಔಷಧಿ, ಚಿಕಿತ್ಸೆಗಾಗಿ ನೆರವು ಅಗತ್ಯವಿದೆ. ಹೀಗಾಗಿ ಈ ಬಗ್ಗೆ RightToLive (ರೈಟ್ ಟು ಲಿವ್ ) ಸೇವಾ ಸಂಸ್ಥೆಯ ಮೂಲಕ ಧನಸಂಗ್ರಹ ಆರಂಭಿಸಲಾಗಿದೆ. ಸಹೃದಯರು ಈ ಕೆಳಗಿನ ಲಿಂಕ್ ಮೂಲಕ ನೆರವು ನೀಡಬಹುದಾಗಿದೆ. https://righttolive.org/Help-Kamala-with-her-Cancer-Treatment
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…