Advertisement
ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ | ಸರ್ವಾಧ್ಯಕ್ಷರಾಗಿ ಹೇಮಾವತಿ ವೀ. ಹೆಗ್ಗಡೆ |

Share

ಉಜಿರೆಯಲ್ಲಿ ನಡೆಯುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ  ಹೇಮಾವತಿ ವೀ. ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಹೇಮಾವತಿ ನೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ ಎಂದು ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ  ಹೇಮಾವತಿ ವೀ. ಹೆಗ್ಗಡೆಯವರು ಕರ್ನಾಟಕ ರಾಜ್ಯದ ಲಕ್ಷಾಂತರ ಗ್ರಾಮೀಣ ಮಹಿಳೆಯರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ಅವರ ದೂರದೃಷ್ಟಿ ಆಲೋಚನೆಗಳು ಮತ್ತು ಚಿಂತನೆಗಳು ಕರ್ನಾಟಕ ರಾಜ್ಯಾದ್ಯಂತ ವಿವಿಧ ಮಹಿಳಾ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಿ ರಾಜ್ಯದ ಗ್ರಾಮೀಣ ಮಹಿಳೆಯರ ಜೀವನದಲ್ಲಿ ಸಮಗ್ರವಾದ ಸಬಲೀಕರಣವನ್ನುಂಟು ಮಾಡಿದೆ. ಧರ್ಮಸ್ಥಳದಲ್ಲಿ ಸಮಾಜದ ಮುಖ್ಯವಾಹಿನಿಯಿಂದ ಹೊರಗುಳಿದಿದ್ದ ಸ್ತ್ರೀಯರನ್ನು ಗುರುತಿಸಿ, ಕನ್ಯಾಕುಮಾರಿ ಯುವತಿ ಮಂಡಳಿಯನ್ನು 1973ರಲ್ಲಿ ಪ್ರಾರಂಭಿಸಿದರು. ಸ್ತ್ರೀಶಕ್ತಿ ಸಂಘದ ಪರಿಕಲ್ಪನೆಯಲ್ಲಿ ಎಲ್ಲ ಮಹಿಳೆಯರು ಆರ್ಥಿಕ ಸ್ವಾವಲಂಬನೆಯ ಬದುಕನ್ನು ನಡೆಸಲು ಕಾರಣೀಭೂತರಾದರು.

ಜ್ಞಾನವಿಕಾಸ ಕಾರ್ಯಕ್ರಮಗಳ ಮೂಲಕ ಲಕ್ಷಾಂತರ ಅನಕ್ಷರಸ್ಥ ಮಹಿಳೆಯರಿಗೆ ಜೀವನ ಶಿಕ್ಷಣವನ್ನು ಧಾರೆ ಎರೆದಿದ್ದಾರೆ. ಗ್ರಾಮೀಣ ಮಹಿಳೆಯರಿಂದ ಸ್ವಸಹಾಯ ಸಂಘವನ್ನು ರಚಿಸಿ, ಅವರನ್ನು ಸಬಲೀಕರಿಸಿದರು. ವಾತ್ಸಲ್ಯ ಕಾರ್ಯಕ್ರಮದ ಮೂಲಕ ಕುಟುಂಬದವರಿಂದ ನಿರ್ಲಕ್ಷ್ಯಕ್ಕೊಳಗಾದವರಿಗೆ ಆಸರೆಯಾದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದತ್ತ ಚಿಂತನೆ ನಡೆಸಿದರು. ಹೀಗೆ ಹತ್ತು ಹಲವು ಸಾಮಾಜಿಕ ಕಾರ್ಯಗಳ ಮೂಲಕ ಸಮಾಜಕ್ಕೆ ವಿಶಿಷ್ಟ ಕೊಡುಗೆ ನೀಡುತ್ತಿದ್ದಾರೆ. ಮಂಜುವಾಣಿ ಮಾಸ ಪತ್ರಿಕೆಯಲ್ಲಿ ಮಗಳಿಗೊಂದು ಪತ್ರ, ‘ನಿರಂತರ’ಯಲ್ಲಿ ‘ಗೆಳತಿ’ ಎಂಬ ಅಂಕಣಗಳ ಮೂಲಕ ತನ್ನದೇ ಶೈಲಿಯಲ್ಲಿ ಬರಹಗಳ ಮೂಲಕ ಸಾಹಿತ್ಯಕ್ಕೆ ಆಪಾರ ಕೊಡುಗೆ ನೀಡಿದ್ದಾರೆ. ಅಂಕಣ ಬರಹಗಳು ಪುಸ್ತಕ ರೂಪದಲ್ಲೂ ಪ್ರಕಟವಾಗಿವೆ. ಅವರು ನಿರಂತರ ಮಾಸ ಪತ್ರಿಕೆಯ ಗೌರವ ಸಂಪಾದಕರಾಗಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಬೆಳೆಗಾರರು ಏಕೆ ಜಾಗ್ರತರಾಗಬೇಕಿದೆ..?

ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…

5 hours ago

ಮೊಗ್ರದಲ್ಲಿ ಕಾಲಾವಧಿ ನೇಮ

https://youtu.be/YgcAfgYUbGQ?si=vp1TmN5dQYAkVPBy

20 hours ago

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ

ಸಿರಿಧಾನ್ಯಗಳ  ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕೃಷಿ ಇಲಾಖೆ  “ಸಿರಿಧಾನ್ಯ ಓಟ…

3 days ago

ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…

3 days ago

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…

3 days ago