MIRROR FOCUS

ಇನ್ನು ಮುಂದೆ SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ | ಬೆಳಗಾವಿ ಅಧಿವೇಶನದಲ್ಲಿ ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

Share

ಕಾಂಗ್ರೆಸ್‌ ಸರ್ಕಾರ(Congress Govt) ಬಂದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು (SEP)ಯನ್ನು ಜಾರಿಗೊಳಿಸಿದೆ. ಈ ರಾಜಕೀಯ ಮೇಲಾಟದಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ.  ದಿನಕ್ಕೊಂದರಂತೆ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ. ಇದೀಗ ಎಸ್‌ಎಸ್‌ಎಲ್‌ಸಿ, ಪಿಯುಸಿಗೆ (SSLC, PUC) ಇನ್ಮುಂದೆ 3 ಪಬ್ಲಿಕ್ ಪರೀಕ್ಷೆಗಳನ್ನು(Public Exam) ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

Advertisement

ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ (BJP MLA) ಪ್ರಶ್ನೆಗೆ ಉತ್ತರಿಸುತ್ತಾ, ನಾವು ಮಾತು ಕೊಟ್ಟಂತೆ ಎನ್‌ಇಪಿ (NEP) ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಎಂದರು. ಎಸ್‌ಎಸ್‌ಎಲ್‌ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ. ಎಸ್‌ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ಹೇಳಿದರು.

ಇದಕ್ಕೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು. ವೈ.ಎ ನಾರಾಯಣಸ್ವಾಮಿ ಇದಕ್ಕೆ ಪ್ರತಿಕ್ರಿಯಿಸಿ, ಸಿನಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡೋದು ಸರಿಯಲ್ಲ. ಎನ್‌ಇಪಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡೋ ತಾಕತ್ ಸರ್ಕಾರಕ್ಕೆ ಇದೆಯಾ? ಎಂದು ಸವಾಲ್ ಹಾಕಿದರು. ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಇಂದು ಮತ್ತೆ ಮುಂದುವರೆಸಲಾಗಿದೆ.

We have now implemented 3 Public Exams for SSLC, PUC. Education Minister Madhu Bangarappa said that this will benefit the children in many ways. Answering a question from a BJP MLA at a function held in Belgaum Suvarnasoudha, we canceled the NEP as promised. He said that we have implemented the previous syllabus and corrected the mistake made by the BJP government.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

3 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

7 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

8 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

9 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

9 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago