ಜ್ಞಾನವಾಪಿಯಲ್ಲಿ ಪೂಜೆ ಮಾಡಲು ಅವಕಾಶ ನೀಡಿದ ಹೈಕೋರ್ಟ್‌ | ತಡೆ ನೀಡಲು ನಕಾರ |

February 26, 2024
12:35 PM

ಹಿಂದೂ ದೇವಾಲಯವನ್ನು(Hindu Temple) ಕೆಡವಿ ಮಸೀದಿಯನ್ನು(Mosque) ಕಟ್ಟಿ ಈಗ ಹಿಂದೂಗಳು ತಮ್ಮ ದೇವಸ್ಥಾನಕ್ಕಾಗಿ ಬೇಡಿಕೆ ಇಟ್ಟರೆ ಅದಕ್ಕೆ ಮುಸಲ್ಮಾನರು ಅಡ್ಡಿ ಉಂಟು ಮಾಡುತ್ತಿದ್ದಾರೆ. ಇದನ್ನು ಕೋರ್ಟ್‌ನಲ್ಲಿ(Court) ಪ್ರಶ್ನಿಸಿ ಹಿಂದೂಗಳು ಹಿಂದಕ್ಕೆ ಪಡೆಯುವ ಸಾಹಸ ಮಾಡಬೇಕಾಗಿದೆ. ಇದೀಗ ಜ್ಞಾನವಾಪಿ ಮಸೀದಿ ಪ್ರಕರಣ (Gyanvapi Mosque case)  ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ. ಜ್ಞಾನವಾಪಿ ಸಂಕೀರ್ಣದ ‘ವ್ಯಾಸ್ ತೆಹ್ಖಾನಾ’ದಲ್ಲಿ (Vyas Tehkhana) ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್(Allahabad High court)ಇಂದು ವಜಾಗೊಳಿಸಿದೆ.

Advertisement

ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಇತ್ತೀಚೆಗೆ ಆದೇಶ ನೀಡಿದ್ದ ಪೂಜೆಯನ್ನು ಮುಂದುವರಿಸಲಾಗುವುದು ಎಂದು ಹೈಕೋರ್ಟ್ ಆದೇಶ ನೀಡಿದೆ. ಅಲಹಾಬಾದ್ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠವು ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಸಂಸ್ಥೆಯಾದ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಸಲ್ಲಿಸಿದ ಮೇಲ್ಮನವಿಯನ್ನು ಆಲಿಸಿ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಇನ್ನು ಕೋರ್ಟ್‌ ತೀರ್ಪು ಸಂಬಂಧ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಇಂದು ಅಲಹಾಬಾದ್ ಹೈಕೋರ್ಟ್(Allahabad High Court)  ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಆದೇಶದ ಮೊದಲ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯವು ಜನವರಿ 17 ಮತ್ತು 31 ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಜ್ಞಾನವಾಪಿ ಕಾಂಪ್ಲೆಕ್ಸ್‌ನ ‘ವ್ಯಾಸ್ ತೆಹ್ಖಾನಾ’ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಯುತ್ತದೆ. ಅವರು ಸುಪ್ರೀಂ ಕೋರ್ಟ್‌ಗೆ (Supreme Court) ಹೋದರೆ, ನಾವು ಸುಪ್ರೀಂ ಕೋರ್ಟ್‌ನಲ್ಲಿ ನಮ್ಮ ಅಭಿಪ್ರಾಯಗಳನ್ನು ಮಂಡಿಸುತ್ತೇವೆ ಎಂದಿದ್ದಾರೆ.

– ಅಂತರ್ಜಾಲ ಮಾಹಿತಿ

Hindus have won again in the Gyanvapi Mosque case. The Allahabad High Court today dismissed a petition challenging the order allowing Hindus to perform puja at the 'Vyas Tehkhana' of the Jnanavapi complex.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |
April 26, 2025
1:58 PM
by: ಸಾಯಿಶೇಖರ್ ಕರಿಕಳ
ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ
April 26, 2025
9:21 AM
by: The Rural Mirror ಸುದ್ದಿಜಾಲ
ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ
April 25, 2025
9:30 PM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್
April 25, 2025
9:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group