5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು | ಹೈಕೋರ್ಟ್​ ಆದೇಶ

March 6, 2024
2:45 PM
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ  5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

Advertisement

ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ  ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.

2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್​​ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್​ ಮೆಟ್ಟಿಲೇರಿತ್ತು.

ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ  ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು  ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ  ತೀರ್ಪು ನೀಡಿ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

 

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group