ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ 5,8,9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಿಗದಿಪಡಿಸಿತ್ತು. ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಅವರು ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಪೀಠ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿದೆ.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಆದೇಶಿಸಿತ್ತು. ಹಾಗೇ 11ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.
ರಾಜ್ಯ ಸರ್ಕಾರದ ಆದೇಶ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ ಮಾನದಂಡಗಳಿಗೆ ವಿರುದ್ಧವಾಗಿದೆ ಎಂದು ಅನುದಾನಿತ ಖಾಸಗಿ ಶಾಲೆಗಳ ಒಕ್ಕೂಟ ನ್ಯಾಯಾಲಯದಲ್ಲಿ ವಾದಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪು ನೀಡಿ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…