ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕುಡಿಯುವ ನೀರಿನ ಪೂರೈಕೆ ಮಾಡುವ ನೀರಾವರಿ ಯೋಜನೆ ರೂಪಿಸುವಲ್ಲಿ ಎತ್ತಿನಹೊಳೆ ಹಾಗೂ ಕಾವೇರಿ ನೀರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆ ವತಿಯಿಂದ ನಿರ್ಮಿಸಿರುವ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ನೂತನ ಕಛೇರಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. ಬೆಂಗಳೂರಿಗೆ 6 ಟಿಎಂಸಿ ನೀರನ್ನು ಪ್ರತ್ಯೇಕವಾಗಿ ಇಡಲು ಈಗಾಗಲೇ ಹೊಸ ಸರ್ಕಾರಿ ಆದೇಶ ಮಾಡಲಾಗಿದೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಭಾರತದ ಸ್ವದೇಶಿ ನ್ಯಾವಿಗೇಷನ್ ವ್ಯವಸ್ಥೆ ನ್ಯಾವಿಕ್ಗೆ ಬಲ ತುಂಬುವ ಉದ್ದೇಶದಿಂದ ಇಸ್ರೋ ಅಕ್ಟೋಬರ್…
ಆಂಧ್ರಪ್ರದೇಶದ ಯಾನಮ್ ಮತ್ತು ಪಕ್ಕದ ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯ ಪ್ರದೇಶದಲ್ಲಿ ನೆಲೆಗೊಂಡಿರುವ ಅರ್ನಬ್…
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ…
ಬೆಳೆ ವಿಮೆ ಪರಿಹಾರ ಪಾವತಿಯಲ್ಲಿ ತಾರತಮ್ಯವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ತಕ್ಷಣ ನ್ಯಾಯಯುತ ಪರಿಹಾರ…
ಅರ್ನಬ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಕರಾವಳಿ…
ವಿಟ್ಲದ ಐಸಿಎಆರ್–ಸಿಪಿಸಿಆರ್ಐ ಕಾರ್ಯಾಗಾರದಲ್ಲಿ ಡಾ. ಹಿಮಾ ಜಾನ್ ಅವರು ಅಡಿಕೆಯ ತೇವಾಂಶ, ವಾಟರ್…