ಪ್ರಮುಖ

21ನೇ ಜಾನುವಾರು ಗಣತಿ ಕಾರ್ಯಕ್ಕೆ ಹೈಟೆಕ್‌ ಟಚ್ | ಪ್ರತಿ ಮನೆಗೂ ಭೇಟಿ ನೀಡಿ ಸ್ಮಾರ್ಟ್‌ ಫೋನ್‌ನಲ್ಲೇ ನಡೆಯಲಿದೆ ಗಣತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಾನುವಾರು ಗಣತಿ(livestock census) ಪ್ರತಿ 5 ವರ್ಷಕ್ಕೊಮ್ಮೆ ನಡೆಸಲಾಗುತ್ತದೆ. ಅದರೇ ಈ ಬಾರಿ ಹೈಟೆಕ್ ಸ್ಪರ್ಶದೊಂದಿಗೆ(Hight tech touch) ಜಾನುವಾರು ಗಣತಿ ನಡೆಯಲಿದೆ. ಕುಂತಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಸೆಪ್ಟೆಂಬರ್ 1ರಿಂದ ಡಿಸೆಂಬರ್ ಅಂತ್ಯದವರೆಗೆ ಅಂದರೆ 4 ತಿಂಗಳ ಕಾಲ ದೇಶಾದ್ಯಂತ(Country) ನಡೆಯಲಿದೆ. ಪ್ರತಿ ಮನೆಗೂ ಗಣತಿದಾರರು ಭೇಟಿ ನೀಡಿ ಅಂಕಿ-ಅಂಶ ದಾಖಲಿಸಿಕೊಳ್ಳಲಿದಾರೆ. ಜಾನುವಾರು ಗಣತಿ 1919ರಿಂದ ನಡೆಯುತ್ತಾ ಬಂದಿದೆ. ಕಳೆದ 100 ವರ್ಷಗಳಲ್ಲಿ 20 ಬಾರಿ ಜಾನುವಾರು ಗಣತಿ ನಡೆದಿದೆ. ಈಗ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ(Department of Animal Husbandry and Veterinary Services) ವತಿಯಿಂದ 21 ನೇ ಜಾನುವಾರು ಗಣತಿ ನಡೆಯುತ್ತಿದೆ. ಹಿಂದೆಲ್ಲ ಪುಸ್ತಕದಲ್ಲಿ ಗಣತಿ ಕಾರ್ಯ ನಡೆಸಲಾಗುತ್ತಿತ್ತು. ಆದರೆ ಈ ಬಾರಿಯಿಂದ ಮೊದಲ ಬಾರಿಗೆ ಸ್ಮಾರ್ಟ ಫೋನ್‌(Smart Phone) ಬಳಸಿ ಎಲ್ಲಾ ಮನೆ ಮನೆಗೆ ತೆರಳಿ ಗಣತಿ ಕಾರ್ಯ ನಡೆಸಲಾಗುತ್ತಿದೆ.

Advertisement

ಎಲ್ಲವೂ ಕಟ್ಟುನಿಟ್ಟು: ಕೇಂದ್ರ ಪಶುಸಂಗೋಪನಾ ಇಲಾಖೆಯಿಂದಲೇ 21 ನೇ ಲೈವ್ ಸ್ಟಾಕ್ ಸೆನ್ಸಸ್ ಎನ್ನುವ ಪ್ರತ್ಯೇಕ ಆಪ್ ಅಭಿವೃದ್ಧಿಪಡಿಸಲಾಗಿದೆ. ಇದರ ಬಗ್ಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದ್ದು, ವಿಶೇಷ ಎಂದರೆ ಇದರಲ್ಲಿ ಎಲ್ಲೋ ಕೂತು ಕಾಟಾಚಾರಕ್ಕೆ ಗಣತಿ ಮಾಡಲು ಸಾಧ್ಯವೇ ಇಲ್ಲ, ಏಕೆಂದರೆ ಗಣತಿದಾರರ ಪ್ರತಿ ಚಲನವಲನಗಳು ಇದರಲ್ಲಿ ರೆಕಾರ್ಡ ಆಗಲಿದ್ದು, ಪ್ರತಿ ಸೆಕೆಂಡ್, ಸ್ಥಳ ಎಲ್ಲವೂ ದಾಖಲಾಗಿದೆ.

ಎಲ್ಲವೂ ಆನ್‍ಲೈನ್ ನಲ್ಲೇ: ಈ ಹಿಂದೆ ಜಾನುವಾರು ಗಣತಿ ಮಾಡಬೇಕಾದರೆ ಪುಸ್ತಕದಲ್ಲಿ 200 ಕಾಲಂಗಳನ್ನು ಭರ್ತಿ ಮಾಡಬೇಕಾಗಿತ್ತು. ಆದರೆ ಈ ಬಾರಿ ಚುಟುಕಾಗಿ ಆಪ್ ಮೂಲಕ ಮಾಹಿತಿ ನಮೂದಿಸಬಹುದು. ನೆಟ್ವರ್ಕ್ ಇಲ್ಲದಿದ್ದರೂ ಈ ಆಪ್ ನೆಟ್ವರ್ಕ ಪ್ರದೇಶಕ್ಕೆ ಬರುತ್ತಿದ್ದಂತೆಯೇ ಕೇಂದ್ರ ಸರ್ವರ್ ಜತೆ ಮಾಹಿತಿಯನ್ನು ಹಂಚಿಕೊಳ್ಳುವಂತೆ ವಿನ್ಯಾಸಪಡಿಸಲಾಗಿದೆ,ಹೀಗಾಗಿ ಎಲ್ಲವೂ ಕರಾರುವಕ್ಕಾಗಿ ನಮೂದಾಗಲಿದೆ.

ಎಷ್ಟು ಗಣತಿದಾರರು?: ಜಾನುವಾರು ಗಣತಿಗಾಗಿ ಒಟ್ಟು ಕೊಡಗು ಜಿಲ್ಲೆಯಲ್ಲಿ 59 ಗಣತಿದಾರರು, 12 ಮೇಲ್ವಿಚಾರಕರು ಇರುತ್ತಾರೆ, ಗಣತಿದಾರರು ಮನೆಮನೆಗೆ ತೆರಳಿದರೆ ಮೇಲ್ವಿಚಾರಕರು ಹಾಗೂ ನೋಡಲ್ ಅಧಿಕಾರಿಗಳು ಅದರ ಒಟ್ಟು ಉಸ್ತುವಾರಿ ವಹಿಸಲಿದ್ದಾರೆ, ನಗರ ಭಾಗದಲ್ಲಿ 4500 ಮನೆಗಳಿಗೊಬ್ಬ ಗಣತಿದಾರ ಇದ್ದರೆ, ಗ್ರಾಮೀಣ ಭಾಗದಲ್ಲಿ 2500 ಮನೆಗಳಿಗೊಬ್ಬ ಗಣತಿದಾರ ಇರುತ್ತಾರೆ, ಪ್ರತಿಯೊಬ್ಬರೂ ಮನೆಗಳಿಗೆ ಭೇಟಿ ನೀಡಿ ಗಣತಿ ನಡೆಸುವುದು ಕಡ್ಡಾಯವಾಗಿದೆ.

ಹೇಗೆ ನಡೆಯಲಿದೆ ಗಣತಿ?: ಯಾವ ತಳಿಯ ಜಾನುವಾರುಗಳು? ವಯಸ್ಸು ಎಷ್ಟು? ಎಷ್ಟು ರೈತರು? ಯಾವ ವರ್ಗದ ರೈತರು? ಎಷ್ಟು ಮಹಿಳೆಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬುದನ್ನು ದಾಖಲಿಸಬೇಕು. ಆ ಮೂಲಕ ಸರ್ಕಾರ ತಮ್ಮ ಮುಂದಿನ ಯೋಜನೆಯನ್ನು ಸಿದ್ಧ್ದಪಡಿಸುವುದು ಇದರ ಮುಖ್ಯ ಉದ್ದೇಶ, ರೈತರು ಹಾಗೂ ಹೈನುಗಾರಿಕೆ ಕ್ಷೇತ್ರಗಳಿಗೆ ಬೇಕಾದ ನೀತಿ, ಕಾರ್ಯಕ್ರಮ ನಿರೂಪಿಸುವುದಕ್ಕಾಗಿ ಗಣತಿಯ ಅಂಶಗಳು ಬಳಕೆಯಾಗುತ್ತವೆ. ಮನೆಗಳಲ್ಲಿ ಸಾಕಲಾಗುವ ದನ, ಎತ್ತು, ಎಮ್ಮೆ, ಕೋಣ, ಆಡು, ಕುರಿ, ಕೋಳಿ, ನಾಯಿ, ಕುದುರೆ, ಎಮು ಹಾಗೂ ಆಸ್ಟ್ರಿಚ್ ಹಕ್ಕಿಗಳ ಮಾಹಿತಿ ಪಡೆಯಲಾಗುತ್ತದೆ, ಬೀಡಾಡಿ ದನ, ನಾಯಿಗಳ ಮಾಹಿತಿಯನ್ನು ಸೇರಿಸಲಾಗುತ್ತದೆ. ದೇವಸ್ಥಾನದಲ್ಲಿ ಆನೆ, ದನ ಸಾಕುವುದಿದ್ದರೆ, ಗೋಶಾಲೆಗಳಿದ್ದರೆ ಮಾಹಿತಿ ಪಡೆಯಲಾಗುತ್ತದೆ. 10ಕ್ಕಿಂತ ಜಾಸ್ತಿ ದನಗಳಿದ್ದರೆ, 1000 ಕ್ಕಿಂತ ಹೆಚ್ಚು ಕೋಳಿ ಸಾಕಿದರೆ, 50ರ ಮೇಲ್ಪಟ್ಟು ಆಡು ಸಾಕಾಣೆ ಇದ್ದರೆ ಅವುಗಳನ್ನು ಫಾರಂ ಎಂದು ಪರಿಗಣಿಸಿ ಮಾಹಿತಿ ನಮೂದಿಸಿಕೊಳ್ಳಲು ನಿರ್ಧರಿಸಲಾಗಿದೆ.

ಎಲ್ಲರಿಗೂ ತರಬೇತಿ: ಜಾನುವಾರು ಗಣತಿ ಸಂಬಂಧ ಮಾಸ್ಟರ್ ಟ್ರೇನರ್ ಗಳ ತರಬೇತಿ ಪೂರ್ಣಗೊಂಡಿದ್ದು, ಎಲ್ಲಾ ಮೆಲ್ವಿಚಾರಕರಿಗೆ ಹಾಗೂ ಎಣಿಕೆದಾರರಿಗೆ ಜಿಲ್ಲೆಯ ಮಾಸ್ಟರ್ ಟ್ರೇನರ್‍ಗಳ ಮೂಲಕ ತರಬೇತಿ ಕಾರ್ಯಕ್ರಮವೂ ಪೂರ್ಣಗೊಂಡಿದೆ ಹಾಗೂ ಸೆಪ್ಟೆಂಬರ್ 1 ರಿಂದ ಗಣತಿಕಾರ್ಯಕ್ಕೆ ಎಲ್ಲಾ ತಯಾರಿಯೂ ನಡೆದಿದೆ.
2019 ರಲ್ಲಿ ಎಷ್ಟಿತ್ತು? 2019ರಲ್ಲಿ ನಡೆದಿದ್ದ ಜಾನುವಾರು ಗಣತಿಯಲ್ಲಿ ಜಿಲ್ಲೆಯಲ್ಲಿ 71,684 ಹಸುಗಳು, 5,236 ಎಮ್ಮೆಗಳು, 650 ಕುರಿಗಳು ಹಾಗೂ 7,603 ಮೆಕೆಗಳು, 8365 ಹಂದಿಗಳು ಇದ್ದವು, ಆದರೆ ಈ ಬಾರಿ ಸಾಕಷ್ಟು ಏರಿಳಿತ ಆಗುವ ನಿರೀಕ್ಷೆ ಇದೆ. ಏಕೆಂದರೆ ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಪ್ರದೇಶಗಳಲ್ಲಿ ನಗರೀಕರಣವಾಗಿದೆ, ಅಲ್ಲದೇ ಕೃಷಿಯಲ್ಲೂ ಬದಲಾವಣೆಯಾಗಿದ್ದು ಇದು ಜಾನುವಾರು ಸಾಕಾಣೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಬಾರಿ ಏನಾಗಬಹುದು?: ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಾದ ಕಾಫಿ, ಏಲಕ್ಕಿ ಹಾಗೂ ಕರಿಮೆಣಸು ಬೆಳೆಯುವ ಉದ್ದೇಶ ಹೆಚ್ಚಾಗಿರುವುದರಿಂದ ದಿನ ಕಳೆದಂತೆ ಜಾನುವಾರು ಸಾಕಾಣಿಕೆಯಲ್ಲಿ ತೊಡಗಿಕೊಳ್ಳುವ ರೈತರ ಸಂಖ್ಯೆ ಕಡಿಮೆಯಾಗುತ್ತಿದ್ದು ಒಟ್ಟಾರೆ ಜಾನುವಾರು ಸಂಖ್ಯೆಯಲ್ಲಿ ಇಳಿಮುಖವಾಗಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

5 hours ago

ಬದುಕು ಪುರಾಣ | ಮೂಡದಿರಲಿ, ಮಂಥರೆ ಮನಸ್ಸು

ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…

5 hours ago

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

17 hours ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

17 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

24 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago