ರಾಜ್ಯಾದ್ಯಂತ ಕಳೆದೆರಡು ತಿಂಗಳಿಂದ ಸಂಘರ್ಷದ ವಾತಾವರಣ ಹುಟ್ಟುಹಾಕಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್ ಪ್ರಕಟಿಸಿದೆ. ಶಾಲೆ ಕಾಲೇಜುಗಳಲ್ಲಿ ಆಯಾ ಕಾಲೇಜು ನಿರ್ಧರಿಸಿದ ಸಮವಸ್ತ್ರ ಕಡ್ಡಾಯವಾಗಿ ಧರಿಸಬೇಕು ಎಂದು ತೀರ್ಪು ಪ್ರಕಟಿಸಿದೆ. ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಹಿಜಾಬ್ ಹಾಗೂ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ತೀರ್ಪು ಪ್ರಕಟಿಸಿದ್ದಾರೆ.
ಮೂವರು ನ್ಯಾಯಮೂರ್ತಿಗಳೂ ಏಕ ತೀರ್ಪು ಪ್ರಕಟ ಮಾಡಿದ್ದು, ಉಡುಪಿ ಕಾಲೇಜಿಗೆ ನಿರ್ದೇಶನ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಹಿಜಾಬ್ ನಿರ್ಬಂಧ ವಿಚಾರದಲ್ಲಿ ಕರ್ನಾಟಕದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
*
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…