ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂಕುಸಿತಗಳು ಸಂಭವಿಸುತ್ತಿದೆ. ಹಲವು ಕಡೆ ರಸ್ತೆಗಳು ಕೊಚ್ಚಿಹೋಗಿವೆ ಮತ್ತು ವ್ಯಾಪಕ ಹಾನಿಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಶಿಮ್ಲಾ-ಚಂಡೀಗಢ ರಸ್ತೆಯನ್ನು ಬಸ್‌ಗಳು ಮತ್ತು ಟ್ರಕ್‌ಗಳಿಗೆ ಸ್ಥಗಿತಗೊಳಿಸಲಾಗಿದೆ. ಸೋಲನ್‌ನ ಕಂದಘಾಟ್ ಪ್ರದೇಶದ ಜಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಮಳೆಯ ನೀರು ಏಕಾಏಕಿ ಹರಿದು ಬಂದ ಪರಿಣಾಮ ಎರಡು ಮನೆಗಳು ಹಾಗೂ ಗೋಶಾಲೆ ಕೊಚ್ಚಿ ಹೋಗಿದೆ. 7 ಮಂದಿ ಬಲಿಯಾಗಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ದುರಂತದ ನಂತರ ಐದು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಭಾನುವಾರ, ಭಾರೀ ಗಾಳಿ ಮಳೆಯ ಕಾರಣದಿಂದ ಮರವೊಂದು ವಾಹನದ ಮೇಲೆ ಬಿದ್ದು ಖಾಸಗಿ ಬಸ್ ಕಂಡಕ್ಟರ್ ಗಾಯಗೊಂಡಿದ್ದರು. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಭಾರೀ ಮಳೆಯಿಂದಾಗಿ ಹಿಮಾಚಲ ರಾಜ್ಯದಾದ್ಯಂತ 621 ರಸ್ತೆಗಳನ್ನು ಮುಚ್ಚಲಾಗಿದೆ. ಹವಾಮಾನ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರವರೆಗೆ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆ, ಗುಡುಗು ಮತ್ತು ಮಿಂಚು ಮುಂದುವರಿಯಲಿದೆ.
ನಿರಂತರ ಮಳೆಯ ಕಾರಣದಿಂದ ಹಿಮಾಚಲ ಪ್ರದೇಶದ ರಾಜ್ಯದ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆಯನ್ನು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಘೋಷಿಸಿದರು.
ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಹಿಮಾಚಲ ಪ್ರದೇಶವು ₹ 7,020 ಕೋಟಿಗಳಷ್ಟು ನಷ್ಟವನ್ನು ಅನುಭವಿಸಿದೆ ಮತ್ತು ಮಳೆ ಸಂಬಂಧಿತ ಘಟನೆಗಳು ಮತ್ತು ರಸ್ತೆ ಅಪಘಾತಗಳಿಂದ 257 ಸಾವುಗಳು ವರದಿಯಾಗಿದೆ.
Source: ANI
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…