Advertisement
MIRROR FOCUS

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

Share

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು’ ಎಂಬ ಸಂದೇಶವನ್ನು ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ(Instagram) ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಸ್ಟೋರಿಯಯಲ್ಲಿ, ವಿಷ್ಣುವಿನ ಅವತಾರವಾದದ ಚಿತ್ರದೊಂದಿಗೆ, ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು ಎಂಬ ಸಂದೇಶ ಬರೆಯಲಾಗಿದೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಈ ಸಂದೇಶ ಹಂಚಿಕೊಂಡಿರುವುದಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟೆಲ್ಲ ನಡೆದರೂ ಅವರು ತಮ್ಮ ಸ್ಟೋರಿಯನ್ನು ಡಿಲೀಟ್ ಮಾಡಿಲ್ಲ. ಇತ್ತೀಚೆಗೆ ಅವರು ಭಾರತ ವಿಶ್ವಕಪ್ ಗೆಲ್ಲಬೇಕು ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದ್ದರು.

2002 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಖ್ತರ್ ಬರೋಬ್ಬರಿ ಗಂಟೆ 161.3 ವೇಗದಲ್ಲಿ ಚೆಂಡೆಸೆದು ಈ ವಿಶ್ವ ದಾಖಲೆಯನ್ನು ನಿರ್ಮಿಸಿದ್ದರು. ಈ ದಾಖಲೆ ನಿರ್ಮಾಣವಾಗಿ 2 ದಶಕಗಳು ಕಳೆದರೂ ಇದನ್ನು ಮೀರುವಂತೆ ಯಾರಿಂದಲೂ ಬೌಲಿಂಗ್ ಮಾಡಲು ಇದುವರೆಗೂ ಯಾವ ಬೌಲರ್‌ಗಳಿಗೂ ಸಾಧ್ಯವಾಗಿಲ್ಲ. ಪಾಕ್ ಪರ 46 ಟೆಸ್ಟ್ ಪಂದ್ಯಗಳನ್ನಾಡಿರುವ ಶೊಯೇಬ್ ಅಖ್ತರ್ 178 ವಿಕೆಟ್ ಕಬಳಿಸಿದ್ದಾರೆ. 163 ಏಕದಿನ ಪಂದ್ಯಗಳಿಂದ 247 ವಿಕೆಟ್ ಪಡೆದರೆ, 15 ಟಿ20 ಪಂದ್ಯಗಳಿಂದ 19 ವಿಕೆಟ್ ಉರುಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

10 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

15 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

2 days ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago