ಲವ್ ಜಿಹಾದ್ ವಿರೋಧಿ ಪೋಲಿಸ್ ದಳ ಸ್ಥಾಪನೆಗೆ ಒತ್ತಾಯ | ಡಿ.10 ರಿಂದ ರಾಜ್ಯವ್ಯಾಪಿ ಆಂದೋಲನ |

December 10, 2022
9:15 PM

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ.  ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ  ಹಿಂದೂ ಸಂಘಟನೆಗಳು ಡಿ.11 ರಿಂದ 18 ರವರೆಗೆ  ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಂದೋಲನದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುತ್ತಿದೆ.

ಹೊನ್ನಾವರ ಮತ್ತು ಕುಮಟಾದ ಶಾಸಕರಾದ  ದಿನಕರ್ ಶೆಟ್ಟಿ ಇವರಿಗೆ ಮನವಿ ನೀಡುವ ಮೂಲಕ ಈ ಅಭಿಯಾನ ಆರಂಭವಾಗಿದೆ.

ಕರ್ನಾಟಕದಲ್ಲಿ 2019 ರವರೆಗೆ 21000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು. ಎಂದು ಹಿಂದೂ ಜನಜಾಗೃತಿ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |
March 13, 2025
1:56 PM
by: ಸಾಯಿಶೇಖರ್ ಕರಿಕಳ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ
ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ
March 13, 2025
11:10 AM
by: ದ ರೂರಲ್ ಮಿರರ್.ಕಾಂ
ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |
March 13, 2025
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror