ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾದ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ ಹಿಂದೂ ಸಂಘಟನೆಗಳು ಡಿ.11 ರಿಂದ 18 ರವರೆಗೆ ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಆಂದೋಲನದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುತ್ತಿದೆ.
ಹೊನ್ನಾವರ ಮತ್ತು ಕುಮಟಾದ ಶಾಸಕರಾದ ದಿನಕರ್ ಶೆಟ್ಟಿ ಇವರಿಗೆ ಮನವಿ ನೀಡುವ ಮೂಲಕ ಈ ಅಭಿಯಾನ ಆರಂಭವಾಗಿದೆ.
ಕರ್ನಾಟಕದಲ್ಲಿ 2019 ರವರೆಗೆ 21000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕು. ಎಂದು ಹಿಂದೂ ಜನಜಾಗೃತಿ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…