ಸಾರ್ವಜನಿಕ ಗಣೇಶೋತ್ಸದ ವಿಸರ್ಜನೆ | ಸೂಕ್ತ ವ್ಯವಸ್ಥೆಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಪುತ್ತೂರು ನಗರಸಭೆಗೆ ಮನವಿ |

August 28, 2022
8:43 PM

ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ವಿಸರ್ಜನೆ ಮಾಡುವುದರ ಉತ್ತಮ ವ್ಯವಸ್ಥೆ ಇಲ್ಲದ ಕಾರಣ, ಗಣೇಶನ ಅಪಮಾನವನ್ನು ಸಹ ನೋಡಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಬದಲಿಸಿ ಶಾಸ್ತ್ರದಲ್ಲಿ ಹೇಳಿದಂತೆ ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಪುತ್ತೂರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.

ಈ ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ (ಮೊಬೈಲ) ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು.

ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಮಧು ಎಸ್. ಮನೋಹರ್, ನಗರಸಭಾ ಆಯುಕ್ತರು ಪುತ್ತೂರು ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಧರ್ಮಪ್ರೆಮಿಗಳಾದ  ದಿನೇಶ್ ಜೈನ್,  ನಿತೀಶ್ ಕುಮಾರ್, ಹಿಂದೂ ಜನಜಾಗೃತಿ ಸಮತಿ ಸಮನ್ವಯಕರಾದ  ಹರಿಪ್ರಸಾದ್ ಶೆಟ್ಟಿ,  ಚಂದ್ರಶೇಖರ,  ದಯಾನಂದ,  ನಾಗೇಶ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror