ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ. ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಸಹ ಉತ್ತರ ಪ್ರದೇಶದ ಮಾದರಿಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಸಂಘಟನೆಗಳ ಮೂಲಕ ರಾಷ್ಟ್ರೀಯ ಹಿಂದೂ ಆಂದೋಲನ ವನ್ನು ಪುತ್ತೂರಿನ ಮಿನಿ ವಿಧಾನಸೌಧದ ಎದುರು ಅಮರ ಜ್ಯೋತಿ ಸರ್ಕಲ್ ನಲ್ಲಿ ನಡೆಸಲಾಯಿತು.
ಪುತ್ತೂರಿನ ಸಾಮಾಜಿಕ ಹೋರಾಟಗಾರ ಹಾಗೂ ಬಿಜೆಪಿಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಟದ ಸಂಚಾಲಕ ದಿನೇಶ್ ಜೈನ್ ಮಾತನಾಡುತ್ತಾ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳನ್ನು ಬಳಿ ಪಶು ಮಾಡಿ ಭಯೋತ್ಪಾದಕ ಚಟುವಟಿಕೆಗಳಿಗೆ ಉಪಯೋಗಿಸುವುದರ ಬಗ್ಗೆ ಅನೇಕ ನಿದರ್ಶನಗಳಿವೆ ಉದಾಹರಣೆ ದೀಪ್ತಿ ಮಾರ್ಲ ಮರಿಯಾಳಾಗಿ ಭಯೋತ್ಪಾದಕ ಚಟುವಟಿಕೆಗಳಿಗೆ ತೊಡಗಿಸುವುದರ ಬಗ್ಗೆ ಹಾಗೂ ಆಶಾ, ಆಯಿಷಾ ಳಾಗಿ ಬಿಹಾರದಲ್ಲಿ ಬಾಂಬು ಸ್ಪೋಟದಲ್ಲಿ ಬಾಗಿ ಯಾದುದರ ಬಗ್ಗೆ ವಿವರಿಸಿ ಹೇಳಿದರು. ಹಲಾಲ್ ಸರ್ಟಿ ಫೈಯಿ ಯಿಂದ ಬರುವ ಹಣ ದೇಶದ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವ ಪ್ರಯತ್ನ ಆಗುತ್ತಿದೆ ಇದರಿಂದ ಬರುವ ಹಣದಿಂದ ದೇಶದ ಭದ್ರತಾ ವ್ಯವಸ್ಥೆ ಹಾನಿಯಾಗುವುದರ ಬಗ್ಗೆ ವಿವರಿಸಿ ಹೇಳಿದರು.
ಹಿಂದೂ ಜನಜಾಗೃತಿ ಸಮಿತಿಯ ದಾಮೋದರ್ ಮಾತನಾಡಿ, ದೆಹಲಿಯ ಜಿಹಾದಿ ಅಫ್ತಾಬ್ ಹಿಂದೂ ಯುವತಿ ಶ್ರದ್ಧಾ ವಾಲ್ಕರ್‌ಳನ್ನು ಲವ್ ಜಿಹಾದ್ ಪ್ರಕರಣದಲ್ಲಿ 35 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಿಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಎಲ್ಲಾ ಗಂಭೀರ ಘಟನೆಗಳನ್ನು ಗಮನಕ್ಕೆ ತಗೆದುಕೊಂಡು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.