ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ.
ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ ಸಂಪೂರ್ಣ ದುರ್ಲಕ್ಷ್ಯ, ಮತಾಂಧರ ಓಲೈಕೆ ಮಾಡುವ ಪ್ರಯತ್ನವು ಕಾಣುತ್ತಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.
ಘಟನೆಯ ಆರೋಪಿಗಳನ್ನು ಬಂಧಿಸುವುದಕ್ಕೆ ಮಾತ್ರ ಸೀಮಿತ ಮಾಡದೆ ಕೂಡಲೇ ಸರಕಾರವು ಈ ಘಟನೆಯನ್ನು ಎಸ್ಐಟಿ ತನಿಖೆಗೆ ಒಳಪಡಿಸಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ ಮತಾಂಧರ ಮನೆಗಳನ್ನು ಮುಟ್ಟುಗೋಲು ಮಾಡಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸುತ್ತದೆ ಎಂದು ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ತಿಳಿಸಿದ್ದಾರೆ.
ಒಂದು ಔಷಧವು ಮಾರುಕಟ್ಟೆಗಿಳಿಯಲು ಹಲವು ಪರೀಕ್ಷೆಗೆ ಒಡ್ಡಿಕೊಂಡು, ಸರಕಾರದಿಂದ ಮಾನ್ಯತೆ ಪಡೆದಾಗ ಮಾತ್ರ…
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…