Advertisement
ಸುದ್ದಿಗಳು

ಪುತ್ತೂರಿನಲ್ಲಿ ಹಿಂದೂ ರಾಷ್ಟ್ರ ಅಧಿವೇಶನ | ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕಿದೆ |

Share

ಸೆಕ್ಯಲರಿಸಂನ ಹೆಸರಿನಲ್ಲಿ ಹಿಂದೂ ಧರ್ಮದ ಮೇಲಾಗುವ ಆಕ್ರಮಣಗಳು, ಹಿಂದೂಗಳ ಹತ್ಯೆಯನ್ನು ತಟೆಗಟ್ಟಲು ಇರುವ ಏಕೈಕ ಮಾರ್ಗವೆಂದರೆ ಹಿಂದೂಸ್ತಾನವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರವೆಂದು ಘೋಷಿಸುವುದಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕರ್ನಾಟಕ ಸಮನ್ವಯಕರಾದ  ಚಂದ್ರ ಮೊಗೇರ ಹೇಳಿದರು.

ಅವರು ಪುತ್ತೂರಿನ ಸ್ವಾಮಿ‌ ಕಲಾ ಮಂದಿರದಲ್ಲಿ  ಹಿಂದೂ ಜನಜಾಗೃತಿ ಸಮಿತಿಯಿಂದ ಆಯೋಜಿಸಲಾಗಿದ್ದ ಹಿಂದೂ ರಾಷ್ಟ್ರ ಜಾಗೃತಿ ಅಧಿವೇಶನದಲ್ಲಿ ಮಾತನಾಡುತ್ತಿದ್ದರು. ಈ ಅಧಿವೇಶದವು ಹಿಂದುತ್ವವಾದಿಗಳು, ಹಿಂದುತ್ವನಿಷ್ಠ ವಕೀಲರು, ಸಾಮಾಜಿಕ ಹೋರಾಟಗಾರರು, ಇತ್ಯಾದಿ ಹಿಂದುತ್ವಕ್ಕಾಗಿ ಕಾರ್ಯ ಮಾಡುವ ಸಂಘಟನೆಗಳು ಒಂದಾಗಿ ಹಿಂದೂ ರಾಷ್ಟ್ರದ ದಿಶೆಯನ್ನು ನಿರ್ಧರಿಸುವ ಉದ್ದೇಶವನ್ನು ಹೊಂದಿದೆ ಎಂದರು.

ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಪುತ್ತೂರಿನ ಸಂಚಾಲಕರಾದ  ಸುಬ್ರಹ್ಮಣ್ಯ ನಟ್ಟೋಜ, ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ,  ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್  ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಿಕಾ ಸಮೂಹ ವಿದ್ಯಾ ಸಂಸ್ಥೆ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಇಂದು ಜಾತ್ಯಾತೀತ ರಾಷ್ಟ್ರದ ಕಲ್ಪನೆಯಲ್ಲಿ ಹಿಂದೂ ಧರ್ಮದ ಮೇಲೆ ಆಘಾತಗಳಾಗುತ್ತಿವೆ. ಈ ನಿಟ್ಟಿನಲ್ಲಿ ಧರ್ಮದ ರಕ್ಷಣೆಗಾಗಿ ಹಿಂದೂಗಳು ಸಮಿಧೆಯಂತೆ ಸಮರ್ಪಣೆಯಾಗಬೇಕಾಗಿದೆ ಎಂದರು.

ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಧರ್ಮಪ್ರಸಾರಕರಾದ  ಶ್ರೀಕೃಷ್ಣ ಉಪಾಧ್ಯಾಯ ಮಾತನಾಡಿ, ಧರ್ಮರಕ್ಷಣೆಗಾಗಿ ಪ್ರತಿಯೊಬ್ಬ ಹಿಂದೂಗಳು ಕನಿಷ್ಠ 1 ಗಂಟೆಯನ್ನಾದರು ನೀಡಿದರೆ ಶೀಘ್ರವೇ ಭಾರತವು ಹಿಂದೂ ರಾಷ್ಟ್ರವಾಗಬಹುದು ಎಂದರು.

ಭಾರತೀಯ ಗೋ ಪರಿವಾರ ಪ್ರಧಾನ ಕಾರ್ಯದರ್ಶಿ ಜಯಾನಂದ ಮಾತನಾಡಿ,33 ಕೋಟಿ ದೇವತೆಗಳು ವಾಸಿಸುವ ಗೋವಿನ ಪೋಷಣೆಯ ಜೊತೆಗೆ ಗೋ ಉತ್ಪನ್ನಗಳ ಬಳಕೆಗೆ ಉತ್ತೇಜಿಸಬೇಕಾಗಿದೆ. ಈ ಮೂಲಕ ದೇಶಿ ಗೋವಿನ ಸಂರಕ್ಷಣೆ ಮಾಡಬೇಕಾಗಿದೆ ಎಂದರು.

ಸಾಮಾಜಿಕ ಹೋರಾಟಗಾರರಾದ  ದಿನೇಶ್ ಜೈನ್ ಮಾತನಾಡಿ ಹಿಂದೂ ಧರ್ಮವನ್ನು ಉಳಿಸುವ ಜೊತೆಗೆ ಅದನ್ನು ಬೆಳೆಸುವುದು ಮತ್ತು ಕೃತಿಯಲ್ಲಿ ತರುವುದು ಅಗತ್ಯವಾಗಿದೆ. ಮಕ್ಕಳಲ್ಲಿ ಬಾಲ್ಯದಿಂದಲೇ ಧರ್ಮದ ಬೀಜವನ್ನು ಬಿತ್ತಬೇಕು ಎಂದು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

6 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

11 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

20 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

21 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago