ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಸಂಭ್ರಮದಲ್ಲಿ ಆಚರಿಸಲಾಗುತ್ತದೆ. ಸಡಗರ ಸಂಭ್ರಮದಿಂದ ಆಚರಣೆಯನ್ನು ಮಾಡುವ ಈ ಉತ್ಸವದಲ್ಲಿ, ಗಣೇಶನ ವಿಸರ್ಜನೆಯ ವಿಷಯ ಬಂದಾಗ, ನಮ್ಮಲ್ಲಿ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ವಿಸರ್ಜನೆ ಮಾಡುವುದರ ಉತ್ತಮ ವ್ಯವಸ್ಥೆ ಇಲ್ಲದ ಕಾರಣ, ಗಣೇಶನ ಅಪಮಾನವನ್ನು ಸಹ ನೋಡಬೇಕಾಗುತ್ತದೆ. ಈ ವ್ಯವಸ್ಥೆಯನ್ನು ಬದಲಿಸಿ ಶಾಸ್ತ್ರದಲ್ಲಿ ಹೇಳಿದಂತೆ ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಉದ್ದೇಶಿಸಿ ಪುತ್ತೂರು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಈ ಮನವಿಯಲ್ಲಿ ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ (ಮೊಬೈಲ) ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಆಗ್ರಹಿಸಲಾಯಿತು.
ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಮಧು ಎಸ್. ಮನೋಹರ್, ನಗರಸಭಾ ಆಯುಕ್ತರು ಪುತ್ತೂರು ಇವರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಧರ್ಮಪ್ರೆಮಿಗಳಾದ ದಿನೇಶ್ ಜೈನ್, ನಿತೀಶ್ ಕುಮಾರ್, ಹಿಂದೂ ಜನಜಾಗೃತಿ ಸಮತಿ ಸಮನ್ವಯಕರಾದ ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ, ದಯಾನಂದ, ನಾಗೇಶ್ ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…