ಇತ್ತೀಚೆಗಷ್ಟೇ ಪ್ಯಾಲೆಸ್ತೀನ್‌ನ ಭಯೋತ್ಪಾದಕ ಸಂಘಟನೆ ‘ಹಮಾಸ್’ ನ ಭಯೋತ್ಪಾದಕರು ಇಸ್ರೇಲ್ ಮೇಲೆ ಸಾವಿರಾರು ರಾಕೆಟ್‌ಗಳಿಂದ ಭೂಮಿ ಮತ್ತು ಸಮುದ್ರದ ಮೂಲಕ ನುಗ್ಗಿ ದಾಳಿ ಮಾಡಿ ನೂರಾರು ಮುಗ್ಧ ಇಸ್ರೇಲಿ ನಾಗರಿಕರನ್ನು ಕೊಂದರು. ಈ ಭಯೋತ್ಪಾದಕ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಜಿಹಾದಿ ಭಯೋತ್ಪಾದನೆಯ ವಿರುದ್ಧ ವಿಶ್ವ ಮಟ್ಟದಲ್ಲಿ ಇಸ್ರೇಲ್ ಜೊತೆ ನಿಲ್ಲುವ ಅವಶ್ಯಕತೆಯಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಭಾರತದಲ್ಲಿಯೂ ಯಹೂದಿ ಸಹೋದರರು ಶಾಂತಿಯುತವಾಗಿ ಬದುಕುತ್ತಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಯಹೂದಿ ಸಹೋದರರ ಜೊತೆ ಇದೆ, ಎಂದೂ ರಮೇಶ ಶಿಂದೆ ಹೇಳಿದ್ದಾರೆ.
ಇಂದು ಇಸ್ರೇಲ್‌ನಲ್ಲಿ ದಾಳಿ ನಡೆದಿದೆ, ಈ ಹಿಂದೆ ಕಾಶ್ಮೀರದಲ್ಲೂ ಇಂತಹ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದವು. ಇಂತಹ ದಾಳಿಗಳು ನಾಳೆ ಎಲ್ಲಿಯಾದರೂ ನಡೆಯಬಹುದು. ಜಿಹಾದಿ ಭಯೋತ್ಪಾದನೆಯು ಅಂತಾರಾಷ್ಟ್ರೀಯ ಸಮಸ್ಯೆಯಾಗಿದೆ. ಇದನ್ನು ವಿಶ್ವ ಮಟ್ಟದಲ್ಲಿ ವಿರೋಧಿಸಬೇಕು. ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ತಕ್ಷಣವೇ ಇಸ್ರೇಲ್ ಮೇಲಿನ ದಾಳಿಯನ್ನು ಖಂಡಿಸಿ ಅದರ ಬೆಂಬಲ ಅಂದರೆ ಜಿಹಾದಿ ಭಯೋತ್ಪಾದನೆಯ ವಿರುದ್ಧ ನಿಲುವು ತೆಗೆದುಕೊಂಡರು. ಭಾರತ ಸರಕಾರದ ಈ ನಿಲುವನ್ನು ಹಿಂದೂ ಜನಜಾಗೃತಿ ಸಮಿತಿಯೂ ಬೆಂಬಲಿಸುತ್ತದೆ.
ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ವಿರುದ್ಧ ಮೆರವಣಿಗೆ ನಡೆಸಿದರು, ಇದು ತುಂಬಾ ಗಂಭೀರವಾಗಿದೆ. ಇದರಿಂದ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಯೋತ್ಪಾದಕ ಸಂಘಟನೆ ‘ಹಮಾಸ್’ಗೆ ಬಹಿರಂಗವಾಗಿ ಬೆಂಬಲ ನೀಡುತ್ತಿದ್ದಾರೆ. ಈ ಘಟನೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.ಯ) ಮೂಲಕ ತನಿಖೆ ನಡೆಸಬೇಕೆಂದೂ ನಾವು ಒತ್ತಾಯಿಸುತ್ತೇವೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…