ಪಿ ಎಫ್‌ ಐ ನಿಷೇಧ | ಹಿಂದೂ ಜನಜಾಗೃತಿ ಸಮಿತಿ ಸ್ವಾಗತ

September 28, 2022
7:30 PM

‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ಅಂದರೆ ‘ಪಿ.ಎಫ್.ಐ.’  ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆಯ  ಅಡಿಯಲ್ಲಿ ನಿಷೇಧಿಸಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಹಿಂದೂ ಜನಜಾಗೃತಿ ಸಮಿತಿಯು ಸ್ವಾಗತಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಷ್ಟ್ರೀಯ ವಕ್ತಾರ ರಮೇಶ ಶಿಂದೆ ಹೇಳಿದ್ದಾರೆ.

Advertisement

‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್‌ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.

‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು
April 24, 2025
6:45 AM
by: The Rural Mirror ಸುದ್ದಿಜಾಲ
ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ
April 24, 2025
6:29 AM
by: The Rural Mirror ಸುದ್ದಿಜಾಲ
82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ
April 24, 2025
6:10 AM
by: ದ ರೂರಲ್ ಮಿರರ್.ಕಾಂ
ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ
April 24, 2025
6:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group