‘ಪಿ.ಎಫ್.ಐ.’ಯು ಹಲವು ದೇಶವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳು ಹಾಗೂ ಹಿಂದೂ ನಾಯಕರ ಹತ್ಯೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಕಳೆದ ಕೆಲವು ವರ್ಷಗಳಿಂದ ಹಿಂದೂ ಜನಜಾಗೃತಿ ಸಮಿತಿಯು ಆಂದೋಲನಗಳು, ಮನವಿಗಳು, ಸೋಶಿಯಲ್ ಮೀಡಿಯಾ ಕ್ಯಾಂಪೆನ್‌ಗಳು ಇತ್ಯಾದಿಗಳ ಮೂಲಕ ‘ಪಿ.ಎಫ್.ಐ.’ವನ್ನು ನಿಷೇಧಿಸಬೇಕೆಂದು ಒತ್ತಾಯಿಸುತ್ತಿತ್ತು. ದೇಶದಲ್ಲಿ ನವರಾತ್ರಿ ನಡೆಯುತ್ತಿದೆ, ಈ ನಡುವೆಯೇ ‘ಪಿ.ಎಫ್.ಐ.’ ಸೇರಿದಂತೆ ಒಂಭತ್ತು ರಾಕ್ಷಸಿ ಜಿಹಾದಿ ಸಂಘಟನೆಗಳನ್ನು ಮುಗಿಸಲಾಗಿದೆ. ಇನ್ನು ‘ಪಿ.ಎಫ್.ಐ.’ನ ರಾಜಕೀಯ ಸಂಘಟನೆಯಾಗಿರುವ ‘ಎಸ್.ಡಿ.ಪಿ.ಐ.’ವನ್ನು ನಿಷೇಧಿಸಿ ‘ದಸರಾ’ ಆಚರಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸಿದೆ.
‘ಪಿ.ಎಫ್.ಐ.’ ಮತ್ತು ಅಂಗಸಂಸ್ಥೆಗಳನ್ನು ನಿಷೇಧಿಸಿದ್ದರೂ ಅವರ ಟ್ವಿಟರ್ ಮತ್ತು ಫೇಸ್‌ಬುಕ್ ಖಾತೆಗಳು ಇನ್ನೂ ಸಕ್ರಿಯವಾಗಿವೆ. ಈ ನಿಷೇಧದಿಂದ ಖಂಡಿತವಾಗಿಯೂ ಭಯೋತ್ಪಾದನಾ ಚಟುವಟಿಕೆಗಳು ನಿಲ್ಲುವವು; ಆದರೆ ಭಯೋತ್ಪಾದನಾ ಸಿದ್ಧಾಂತವನ್ನು ಹರಡುವ ಕಾರ್ಯವು ಮುಂದುವರಿಯುವುದು. ಒಂದು ವೇಳೆ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಭಯೋತ್ಪಾದನೆಯ ಪ್ರಸಾರ ಮುಂದುವರೆದರೆ, ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾರಣವಾಗುವುದು ಮತ್ತು ಪ್ರತ್ಯಕ್ಷ ಹೇರಿದ ಈ ನಿಷೇಧಕ್ಕೆ ಯಾವುದೇ ಅರ್ಥವಿರುವುದಿಲ್ಲ. ಆದ್ದರಿಂದ ‘ಪಿ.ಎಫ್.ಐ.’ ಮತ್ತು ಅದರ ಎಲ್ಲ ಅಂಗಸಂಸ್ಥೆಯ ಸಂಘಟನೆಗಳ ಟ್ವಿಟರ್ ಮತ್ತು ಫೇಸ್‌ಬುಕ್ ಸಹಿತ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ತಕ್ಷಣವೇ ಮುಚ್ಚಬೇಕು ಎಂದು ನಾವು ಬಲವಾಗಿ ಆಗ್ರಹಿಸುತ್ತೇವೆ ಎಂದು ಪ್ರಕಟಣೆ ತಿಳಿಸಿದೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.