ರಾಜ್ಯದಲ್ಲಿಯೂ ಮದರಸಾ (Madrasa) ನಿಷೇಧಿಸುವಂತೆ ವಿವಿಧ ಹಿಂದೂಪರ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಇಲ್ಲಿ ಕೇವಲ ಧರ್ಮ ಬೋಧನೆ ಇರುತ್ತದೆ. ಹೀಗಾಗಿ ಇಂತಹ ಶಿಕ್ಷಣ ಅಗತ್ಯ ಇರುವುದಿಲ್ಲ ಎನ್ನುವುದು ಅರ್ಜಿದಾರರ ಬೇಡಿಕೆ. ಇದೀಗ ಈ ಮನವಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ.
ಮದರಸಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ ಮದರಸಗಳನ್ನು ಬ್ಯಾನ್ ಮಾಡಿ ಅಲ್ಲಿ ಓದುತ್ತಿರುವ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಮಾಡಬೇಕು ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಲಾಗಿದೆ. ಮದರಸಾ ಶಿಕ್ಷಕರಿಗೆ ಯಾವುದೇ ಪಾಠ ಬೋಧನೆಗೆ ಅರ್ಹತೆ ಇರುವುದಿಲ್ಲ. ಮಕ್ಕಳಿಗೆ ಗಣಿತ ಇತಿಹಾಸ ಭಾಷೆಗಳ ಪರಿಚಯವೇ ಮದರಸಾಗಳಲ್ಲಿ ಮಾಡುವುದಿಲ್ಲ. ಹೀಗಾಗಿ ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಸಾಧ್ಯತೆ ಇರುವುದರಿಂದ ಮದರಸಾಗಳನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.
ಗ್ರಾಮೀಣ ಭಾಗದಿಂದ ತೊಡಗಿ ಎಲ್ಲೆಡೆಯೂ ಮದರಸಾಗಳು ಕಾರ್ಯನಿರ್ವಹಿಸುತ್ತವೆ. ಮದರಸಾಗಳಿಗಾಗಿಯೇ ವಿವಿಧ ಸೌಲಭ್ಯಗಳು ಇದ್ದು ಅಲ್ಲಿನ ಶಿಕ್ಷಣ ವ್ಯವಸ್ಥೆಯಾಗಿಯೇ ಪ್ರತ್ಯೇಕ ವಿಭಾಗವೂ ಇದೆ. ಹೀಗಾಗಿ ಇದೀಗ ಹಿಂದೂ ಸಂಘಟನೆಗಳು ನೀಡಿರುವ ಮನವಿ ಇನ್ನೊಂದು ಚರ್ಚೆಗೆ ಕಾರಣವಾಗಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…