ಪಾಕಿಸ್ತಾನದಲ್ಲಿರುವ ಹಿಂದೂ ನಿಯೋಗವು ಈ ತಿಂಗಳ ಕೊನೆಯಲ್ಲಿ ಭಾರತದಲ್ಲಿನ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ ಎಂದು ಪಾಕಿಸ್ತಾನ ಹಿಂದೂ ಕೌನ್ಸಿಲ್‌ನ ಮುಖ್ಯಸ್ಥ ರಮೇಶ್ ಕುಮಾರ್ ಭಾನುವಾರದಂದು ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧವನ್ನು ಉತ್ತಮಗೊಳಿಸುವತ್ತ ಇದೊಂದು ಉತ್ತಮ ಹೆಜ್ಜೆಯಾಗಿದೆ. ನಿಯೋಗವು ಜನವರಿ 20 ರಂದು ಭಾರತವನ್ನು ತಲುಪುವ ನಿರೀಕ್ಷೆಯಿದೆ ಮತ್ತು ಪ್ರವಾಸದಲ್ಲಿ ಹಲವಾರು ದೇವಾಲಯಗಳನ್ನು ನಿಗದಿಪಡಿಸಲಾಗಿದೆ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.
ಯಾವ ದೇವಾಲಯಗಳಿಗೆ ಭೇಟಿ ನೀಡಲಾಗುವುದು ಮತ್ತು ಭೇಟಿ ನೀಡುವ ಗುಂಪಿನಲ್ಲಿ ಎಷ್ಟು ಯಾತ್ರಿಕರು ಇರುತ್ತಾರೆ ಎಂಬ ವಿವರಗಳು ಇನ್ನೂ ಅಂತಿಮಗೊಂಡಿಲ್ಲ. ಮಾತ್ರವಲ್ಲ, ಭಾರತ, ಯುಎಸ್ ಮತ್ತು ಗಲ್ಫ್ ಪ್ರದೇಶದ 200 ಕ್ಕೂ ಹೆಚ್ಚು ಹಿಂದೂ ಯಾತ್ರಿಕರು ಭಾನುವಾರ ವಾಯುವ್ಯ ಪಾಕಿಸ್ತಾನದಲ್ಲಿರುವ 100 ವರ್ಷಗಳಷ್ಟು ಹಳೆಯದಾದ ಮಹರಾಜ ಪರಮಹಂಸ ಜಿ ಮಂದಿರದಲ್ಲಿ ಪ್ರಾರ್ಥನೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…