₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

June 10, 2026
6:39 AM
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ ಇಲಾಖೆ ಜಪ್ತಿ ಮಾಡಿದೆ. ಶಿವಮೊಗ್ಗದ ಎರಡು ವ್ಯಾಪಾರ ಸಂಸ್ಥೆಗಳ ಹೆಸರೂ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದು, ಒಟ್ಟು ಎಂಟು ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ.

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಕಳಮನುರಿ ತಾಲ್ಲೂಕಿನ ವಾರಂಗಾ ಫಾಟಾ ಪ್ರದೇಶದಲ್ಲಿ ಆಹಾರ ಸುರಕ್ಷತಾ ಇಲಾಖೆಯು ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ಸುಮಾರು ₹2.34 ಕೋಟಿ ಮೌಲ್ಯದ ಅನುಮಾನಾಸ್ಪದ ಅಡಿಕೆಯನ್ನು ಜಪ್ತಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯ ವಿರುದ್ಧ ಅಖಾಡಾ ಬಾಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಜೂನ್ 8 ರ ಸಂಜೆ ನಾಗ್ಪುರ ರಸ್ತೆಯಲ್ಲಿರುವ ಹೋಟೆಲ್ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಪರಿಶೀಲಿಸಿದ ವೇಳೆ ದೊಡ್ಡ ಪ್ರಮಾಣದ ಅಡಿಕೆ ಸಂಗ್ರಹ ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ಅಡಿಕೆ ಮಾನವ ಸೇವನೆಗೆ ಸುರಕ್ಷಿತವಲ್ಲ ಎಂಬ ಅನುಮಾನ ವ್ಯಕ್ತವಾಗಿದ್ದು, ಆಹಾರ ಸುರಕ್ಷತಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ.

ಈ ಪ್ರಕರಣದಲ್ಲಿ ಸೋಲಾಪುರ, ಅಹಮದ್‌ನಗರ ಮೂಲದ ಕೆಲ ವ್ಯಕ್ತಿಗಳ ಜೊತೆಗೆ ಶಿವಮೊಗ್ಗ ಮೂಲದ ಟ್ರೇಡರ್ಸ್‌ ಹಾಗೂ ಛತ್ತೀಸ್‌ಗಢ, ದೆಹಲಿಯ ಎರಡು ಟ್ರೇಡರ್ಸ್ ಸೇರಿದಂತೆ ಒಟ್ಟು ಎಂಟು ಮಂದಿ ಹಾಗೂ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಾಚರಣೆಯಲ್ಲಿ ಮೂರು ಲಾರಿಗಳಿಂದ ಒಟ್ಟು 1,265 ಚೀಲಗಳ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ಇದರ ಒಟ್ಟು ತೂಕ 88,544 ಕೆ.ಜಿ. ಆಗಿದ್ದು, ಅಂದಾಜು ಮೌಲ್ಯ ₹2,34,64,160 ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಸೇರಿ ಮಾನವ ಸೇವನೆಗೆ ಅಸುರಕ್ಷಿತವಾಗಿರಬಹುದಾದ ಅಡಿಕೆಯನ್ನು ಸಾಗಾಟ, ಖರೀದಿ ಮತ್ತು ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡಿದ ಆರೋಪದಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.

Food Safety Department officials in Maharashtra’s Hingoli district seized 88,544 kg of suspected unsafe arecanut worth ₹2.34 crore. Eight persons and firms, including traders from Shivamogga, have been booked, while three individuals have been taken into custody for further investigation.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror