ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

June 15, 2025
10:27 PM
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಭಾರೀ ಮಳೆಯ ಕಾರಣದಿಂದ  ಸೋಮವಾರ  ದ‌ಕ್ಷಿಣ ಕನ್ನಡ  ಜಿಲ್ಲೆಯ 5 ತಾಲೂಕುಗಳಿಗೆ ಮತ್ತು ಉಡುಪಿ, ಕೊಡಗು, ಚಿಕ್ಕಮಗಳೂರು  ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯ ಕಾರಣದಿಂದ  ಸೋಮವಾರ  ದ‌ಕ್ಷಿಣ ಕನ್ನಡ  ಜಿಲ್ಲೆ ಮತ್ತು ಉಡುಪಿ, ಕೊಡಗು, ಚಿಕ್ಕಮಗಳೂರು  ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

Advertisement
Advertisement

ದ ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಪ್ರಕಟಿಸಿದ್ದಾರೆ.  ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ 10ನೇ ತರಗತಿಯವರೆಗೆ ರಜೆ ಘೋಷಣೆ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕೊಡಗಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜೂನ್ 16 ರಂದು ರಜೆ ಘೋಷಿಸಲಾಗಿದೆ.  ಚಿಕ್ಕಮಗಳೂರಲ್ಲೂ ಭಾರೀ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಸೋಮವಾರ  6 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಸತತ ಮಳೆಯ ಪರಿಣಾಮ ನದಿಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯಲ್ಲಿ ಇಂದು ಕೂಡ ಬೆಳಗ್ಗಿನಿಂದಲೇ ನಿರಂತರ ಮಳೆಯಾಗಿದ್ದು ಮಂಗಳೂರು ನಗರದ ಪಂಪ್ ವೆಲ್, ಕೊಟ್ಟಾರ, ಪಡೀಲ್ ಪ್ರದೇಶಗಳು ಜಲಾವೃತಗೊಂಡಿವೆ. ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲೆಯ ಎಲ್ಲಾ ತಹಶೀಲ್ದಾರರು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೂ ಗಾಳಿ ಸಹಿತ ಮಳೆಯಾಗುತ್ತಿದೆ. ಹೆಚ್ಚಿನ ಮಳೆಯಿಂದ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ರಾಷ್ಟಿçಯ ಹೆದ್ದಾರಿ 169 ರಲ್ಲಿ ಭೂ ಕುಸಿತ ಉಂಟಾಗಿದೆ. ಅಪಾರ ಪ್ರಮಾಣದ ಕಲ್ಲು ಮಣ್ಣು ರಸ್ತೆಗೆ ಕುಸಿದು ಬಿದ್ದಿದರಿಂದ ಕೆಲ ಕಾಲ ಶೃಂಗೇರಿ – ಮಂಗಳೂರು ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಮಣ್ಣು ಕಲ್ಲುಗಳನ್ನು  ರಸ್ತೆಯಿಂದ ತೆರವುಗೊಳಿಸಲಾಗಿದೆಯಾದರು ಈ ರಸ್ತೆಯ ಹಲವೆಡೆ ಮಣ್ಣು ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಬದಲಿ ಮಾರ್ಗಗಳಲ್ಲಿ ತೆರಳಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.  ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ಕೆಮ್ಮಣ್ಣುಗುಂಡಿ, ದತ್ತಪೀಠ ಭಾಗಗಳಲ್ಲಿ  ನಿರಂತರ ಗಾಳಿ ಮಳೆಯಾಗುತ್ತಿದೆ. ಇಂದು ಮಳೆಯಿಂದ ರಸ್ತೆ ಕಾಣದೆ ಮುಳ್ಳಯ್ಯನಗಿರಿಗೆ ತೆರಳುವ ಕವಿಕಲ್ ಗಂಡಿ  ಬಳಿ ಪ್ರವಾಸಿಗರ ಕಾರೊಂದು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಐವರು ಪ್ರವಾಸಿಗರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ ಸುತ್ತ-ಮುತ್ತ ಭಾರಿ ಮಳೆಯಾಗುತ್ತಿದೆ. ಚಾರ್ಮಾಡಿ ಘಾಟ್‌ನ ರಸ್ತೆ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ಭಾಗದಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕುಮಟಾ – ಶಿರಸಿ ಹೆದ್ದಾರಿಯ ದೇವಿ ಮನೆ ಘಟ್ಟದಲ್ಲಿ ನಿನ್ನೆ ತಡರಾತ್ರಿ ಭಾರಿ ಗುಡ್ಡ ಕುಸಿತ ಉಂಟಾಗಿದ್ದು, ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ನಿನ್ನೆ ಮಧ್ಯರಾತ್ರಿ ಸುಮಾರು  ಗುಡ್ಡ ಕುಸಿತವಾಗಿದೆ. ಮಣ್ಣಿನ ಜೊತೆ ಕಲ್ಲು ಬಂಡೆಕಲ್ಲುಗಳು ಹೆದ್ದಾರಿಯಲ್ಲಿ ಉರುಳಿ ಬಿದ್ದಿದೆ. ಗುರುವಾರ ಸಂಜೆ ಸಹ ಇದೇ ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆಗೆ ಹೆದ್ದಾರಿಯಲ್ಲಿ ಬಿದ್ದಿದ್ದ ಮಣ್ಣುನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ರಾತ್ರಿ ಸುರಿದ ಮಳೆಯಿಂದಾಗಿ ಮತ್ತೆ ಅದೇ ಸ್ಥಳದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಣ್ಣಿನ ಜೊತೆಯಲ್ಲಿ ಕಲ್ಲುಬಂಡೆಗಳು ಉರುಳಿ ಬಿದ್ದಿರುವುದರಿಂದ ಕುಮಟಾ – ಶಿರಸಿ ಹೆದ್ದಾರಿಯಲ್ಲಿ ಸದ್ಯ ಸಂಚಾರ ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯ ನಡೆಸಲಾಗುತ್ತಿದೆ.

Advertisement
ಮಳೆ ಮುನ್ನೆಚ್ಚರಿಕೆ - ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಆಯುಕ್ತರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ.  ರಸ್ತೆ ಬದಿ ಗುಡ್ಡ ಕುಸಿತ ಸಂಭವಿಸಿದರೆ ಆದಷ್ಟು ಶೀಘ್ರ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಅಪಾಯದ ಅಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸಲು ಕ್ರಮಕೈಗೊಳ್ಳಬೇಕು. ಪುನರ್ವಸತಿ ಕೇಂದ್ರಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ. ಪ್ರಾಕೃತಿಕ ವಿಕೋಪದಿಂದ ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು. ಕಂಟ್ರೋಲ್ ರೂಂ ನಿರಂತರ ಕಾರ್ಯಾಚರಣೆಯಲ್ಲಿದ್ದು, ಮಳೆ ಹಾನಿ ಕುರಿತ ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಪ್ರಾಕೃತಿಕ ವಿಕೋಪ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ
July 26, 2025
2:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?
July 26, 2025
11:18 AM
by: ಸಾಯಿಶೇಖರ್ ಕರಿಕಳ
ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ
July 26, 2025
7:38 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group