ಸುದ್ದಿಗಳು

ಅಡಿಕೆ ಎಲೆಚುಕ್ಕಿ ರೋಗ ಸದನದಲ್ಲಿ ಚರ್ಚೆ | ಸಂಶೋಧನೆ ಮಾಡಲು ಸರ್ಕಾರ ಪ್ರಯತ್ನ ಮಾಡಿದೆ | ವಿಜ್ಞಾನಿಗಳು ಅಧ್ಯಯನ ಮಾಡುತ್ತಿದ್ದಾರೆ |

Share

ರಾಜ್ಯದಲ್ಲಿ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ನಡೆಯಿತು. ಎಲೆ ಚುಕ್ಕಿ ರೋಗ ನಿಯಂತ್ರಣದ ಪರಿಶೀಲನೆಗಾಗಿ ಕೇಂದ್ರ ಸರ್ಕಾರದ ವಿಜ್ಞಾನಿಗಳ ತಂಡ ಈಗಾಗಲೇ ರಾಜ್ಯಕ್ಕೆ ಭೇಟಿ ನೀಡಿದ್ದು, ತ್ವರಿತವಾಗಿ ಔಷಧಿ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

Advertisement

ಎಲೆಚುಕ್ಕಿ ರೋಗದ ಬಗ್ಗೆ ಸರ್ಕಾರದ ಕೈಗೊಂಡ ಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರ್ ಹಾಗೂ ಶಾಸಕ ಉಮಾನಾಥ್ ಕೋಟ್ಯಾನ್ ಅವರ ಪ್ರಶ್ನೆಗಳಿಗೆ ಉತ್ತರಿಸಿದ  ಸಚಿವ ಆರಗ ಜ್ಞಾನೇಂದ್ರ , ಎಲೆ ಚುಕ್ಕಿ ರೋಗಕ್ಕೆ ಅಡಿಕೆ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ತುತ್ತಾಗುತ್ತಿದ್ದು, ಇತ್ತೀಚಿಗೆ ಈ ರೋಗ ಗಾಳಿ ಮೂಲಕ ಹೆಚ್ಚಾಗಿ ಹರಡುತ್ತಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿಗಳು ಇತ್ತೀಚೆಗೆ ಕೆಲ ಅಡಿಕೆ ತೋಟಗಳಿಗೆ ಭೇಟಿ ನೀಡಿದ್ದು, ರೋಗ ನಿಯಂತ್ರಣದೊಂದಿಗೆ ಬೆಳೆಗಾರರ ನೆರವಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ. ವಿಜ್ಞಾನಿಗಳು ಈ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆಗಳನ್ನು ಮಾಡುತ್ತಿದ್ದಾರೆ ಎಂದರು.

ಈಗಾಗಲೇ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ರೋಗದ ಔಷಧಿ ಕಂಡು ಹಿಡಿಯುವ ಸಲುವಾಗಿಯೇ ತೋಟಗಾರಿಕೆ ವಿವಿಗಳಿಗೆ ರೂ.4 ಕೋಟಿಯಷ್ಟು ಹಣ ಬಿಡುಗಡೆ ಮಾಡಲಾಗಿದೆ ಹಾಗೂ ಏಲಕ್ಕಿ, ಕಾಳುಮೆಣಸು ಬೆಳೆಗಾರರ ಸಲಕರಣೆಗಳ ಖರೀದಿಗೆ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ನೀಡಲಾಗುತ್ತಿದೆ. ಸಹಾಯಧನವು ಪರಿಶಿಷ್ಟ ಜಾತಿ, ಪಂಗಡಗಳಿಗೆ ಶೇ.90 ಇದ್ದು ಸಾಮಾನ್ಯ ವರ್ಗಗಳಿಗೆ ಶೇ.70 ಇದೆ ಎಂದರು. ಅಡಿಕೆ ಕೀಳುವ ದೋಟಿಗಳ ಬೆಲೆ ಜಾಸ್ತಿಯಿದ್ದು, ಅವುಗಳ ಖರೀದಿಗಾಗಿ ರೂ.30 ಸಾವಿರದಷ್ಟು ಸಬ್ಸಿಡಿ ನೀಡಲಾಗುತ್ತಿದೆ ಎಂದರು. 1962ರಿಂದ ಈ ರೋಗ ಇದೆ. ವಿಜ್ಞಾನಿಗಳ ಪ್ರಕಾರ ಮಳೆ ಮತ್ತು ಮೋಡದಿಂದ ಬಂದಿದೆ ಎಂದು ಸದನಕ್ಕೆ ಅರಗ ಜ್ಞಾನೇಂದ್ರ ವಿವರಿಸಿದರು.

ಪರ್ಯಾಯ ಬೆಳೆ ಬಗ್ಗೆ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಹಾರ ಬೆಳೆ ಬೆಳೆಯಲು ಸಾಧ್ಯವಿಲ್ಲ. ತೆಂಗು, ಅಡಿಕೆ, ಏಲಕ್ಕಿ, ಕಾಳು ಮೆಣಸು ಬೆಳೆಯುತ್ತಿದ್ದಾರೆ. ಸಬ್ಸಿಡಿ ಕೊಡುವ ಕೆಲಸ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷದ ಉಪನಾಯಕ ಯು.ಟಿ ಖಾದರ್ ಪ್ರಶ್ನೆ ಮಾಡಿ, ಅಡಿಕೆ ಕರಾವಳಿ ಮತ್ತು ಮಲೆನಾಡಿನ ಪ್ರಮುಖ ಬೆಳೆ. ತಡ ಮಾಡದಂತೆ ಕೊಳೆ ರೋಗ ಬಂದಾಗ ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.

ತೋಟಗಾರಿಕಾ ಸಚಿವರ ಸಭೆಯಲ್ಲಿ ಎಲೆಚುಕ್ಕಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಾಗಿದೆ, ವಿಸ್ತಾರವಾಗುತ್ತಿರುವ ಅಡಿಕೆ ಬೆಳೆ ಪ್ರದೇಶವನ್ನು ಗಮನಿಸಿದರೆ ಮುಂದೊಂದು ದಿನ ಬೆಲೆ ಕುಸಿದು ಬೀಳುವ ಆತಂಕವಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

2 hours ago

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

18 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

18 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

19 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

1 day ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

1 day ago