ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು “ಝೇಂಕಾರ ಬ್ರ್ಯಾಂಡ್ ಹೆಸರು ಅಭಿವೃದ್ಧಿ ಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆದಿದ್ದು, ತೋಟಗಾರಿಕೆ ಇಲಾಖೆಯು ಬ್ರಾಂಡ್‍ನ ಮಾಲೀಕತ್ವವನ್ನು ಹೊಂದಿದೆ. ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಬ್ರ್ಯಾಂಡ್ ಹೆಸರು ಮತ್ತು ಲೋಗೋ ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶವಿದ್ದು, ಬ್ರ್ಯಾಂಡ್ ಹೆಸರು ಬಳಸಿ ಜೇನುತುಪ್ಪ ಮಾರಾಟ ಮಾಡಲು ಇಚ್ಛಿಸುವ ಜೇನುತುಪ್ಪ ಉತ್ಪಾದಕರು ಹೆಚ್ಚಿನ ಮಾಹಿತಿಗಾಗಿ ತಾಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel