ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ರೈತರಿಗೆ ಸಲಹೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿಂದು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ ಹಾಗೂ ಜೇನು ಚಾಕಲೇಟ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೇನಿನಿಂದಲೇ ಚಾಕಲೇಟ್ ಸಿದ್ಧಗೊಂಡು ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇಂತಹ ಹೊಸ ಹೊಸ ಪ್ರಯೋಗಗಳು ನಡೆಯುತ್ತಿರಬೇಕು ಎಂದರು. ಔಷಧೀಯ ಗುಣವುಳ್ಳ ಜೇನು ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ಇದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈ ಕಾರ್ಯಕ್ರಮದಲ್ಲಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಮೊದಲಾದವರಿದ್ದರು.
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…