ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು | ಅಂಗಾಂಗ ದಾನ ಮಾಡಿ ಮಗಳ ಬದುಕಿನ ಸಾರ್ಥಕತೆ ಮೆರೆದ ಪೋಷಕರು |

February 12, 2022
10:28 PM

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ  ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ  ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.

ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ
October 7, 2026
11:35 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ
October 7, 2026
11:22 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror