ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳೊಬ್ಬಳು ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಅಂಗಾಂಗ ದಾನದ ಮೂಲಕ ಮದುಮಗಳ ಪೋಷಕರು ಮಗಳ ಬದುಕಿನ ಸಾರ್ಥಕತೆಯನ್ನು ಮೆರೆದಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮದುಮಗಳು ಚೈತ್ರಾ ಮದುವೆಯ ಆರಕ್ಷತೆಯ ಸಂದರ್ಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಈ ವೇಳೆ ಆಕೆಯನ್ನು ಕೂಡಲೇ ಬೆಂಗಳೂರಿನ ನಿಮ್ದಾನ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆಕೆಯನ್ನು ಪರೀಕ್ಷಿಸಿದಂತ ವೈದ್ಯರು ಚೈತ್ರ ಮೆದುಳು ನಿಷ್ಕ್ರೀಯವಾಗಿದೆ ಎಂದು ತಿಳಿಸಿದ್ದಾರೆ. ಬಳಿಕ ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನ ಮಾಡಲು ಮನವೊಲಿಸಿದರು. ವೈದ್ಯರ ಮಾತಿಗೆ ಒಪ್ಪಿದಂತ ಪೋಷಕರು, ಚೈತ್ರಳ ಅಂಗಾಂಗವನ್ನು ದಾನ ಮಾಡಿದ್ದಾರೆ.
ಹೀಗಾಗಿ ಹಲವು ರೋಗಗಳಿಂದ ಬಳಲುತ್ತಿದ್ದ ಅನೇಕರ ಬಾಳಿಗೆ ಚೈತ್ರ ಬೆಳಕಾಗುವಂತಾಗಿದೆ. ಈ ಮಾಹಿತಿಯನ್ನು ಟ್ವೀಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹಂಚಿಕೊಂಡಿದ್ದಾರೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…