ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಮೈಸೂರಿನಲ್ಲಿ ದಾಖಲಾಗಿದೆ. ಬಾಗಲಕೋಟೆ, ಧಾರವಾಡದಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ 35 ರಿಂದ 37 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮೂರು ದಿನಗಳು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗುವ ಸಂಭವವಿದೆ. ಈ ಜಿಲ್ಲೆಗಳಲ್ಲಿ ’ಎಲ್ಲೊ’ ಅಲರ್ಟ್ ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ತಿಳಿಸಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel