ಬೆಂಗಳೂರು | ಹೋಟೆಲ್ ತಿಂಡಿ-ತಿನಿಸು ಮತ್ತಷ್ಟು ದುಬಾರಿ…! | ಶೇಕಡಾ 10 ರಷ್ಟು ಬೆಲೆ ಏರಿಕೆ |

April 6, 2022
10:00 AM

ಅಡುಗೆ ಅನಿಲ, ಎಣ್ಣೆ  ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ಪತ್ರಿಕಾ ಪ್ರಕಟಣೆ ಮೂಲಕ  ಹೇಳಿದ್ದಾರೆ.

ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್​ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್​ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು  ಅನಿವಾರ್ಯವಾಗಿದೆ ಎಂದು  ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್‌ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು  ಆಯಾ ಹೋಟೆಲ್​ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror