ಅಡುಗೆ ಅನಿಲ, ಎಣ್ಣೆ ಹಾಗೂ ತೈಲ ದರ ಹೆಚ್ಚಾದ ಹಿನ್ನೆಲೆಯಲ್ಲಿ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಹೆಚ್ಚಳ ಅನಿವಾರ್ಯ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಪತ್ರಿಕಾ ಪ್ರಕಟಣೆ ಮೂಲಕ ಹೇಳಿದ್ದಾರೆ.
ಆಡುಗೆ ಎಣ್ಣೆ, ಕಾಫೀ ಪುಡಿ, ಗ್ಯಾಸ್ ಮುಂತಾದ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಹೋಟೆಲ್ ಮಾಲೀಕರಿಗೆ ನುಂಗಲಾರದ ತುತ್ತಾದಂತಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಹೋಟೆಲ್, ದರ್ಶಿನಿ, ರೆಸ್ಟೊರೆಂಟ್ಗಳಲ್ಲಿ ಶೇ.10ರಷ್ಟು ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ. ಗ್ರಾಹಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಶೇಕಡ 10 ರಷ್ಟು ಆಹಾರ ಪದಾರ್ಥಗಳ ಬೆಲೆ ಜಾಸ್ತಿ ಮಾಡಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ವಾರದಲ್ಲಿ ಹೋಟೆಲ್‌ನಲ್ಲಿ ಬೆಲೆ ಏರಿಕೆ ಮಾಡಲಾಗುವುದು. ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಕಡಿಮೆ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿದ್ದೇವೆ. ಆಯಾ ಹೊಟೇಲ್ ಗಳಲ್ಲಿ ಯಾವ ತಿಂಡಿಗೆ ಎಷ್ಟು ಏರಿಕೆ ಎಂಬುದು ಆಯಾ ಹೋಟೆಲ್ಗಳ ಮಾಲೀಕರ ನಿರ್ಧಾರ ತೆಗೆದುಕೊಳ್ತಾರೆ ಅಂತ ಪಿ.ಸಿ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.