Advertisement
ವೆದರ್ ಮಿರರ್

ಹವಾಮಾನ ವರದಿ | 25-12-2025 | ರಾಜ್ಯದಲ್ಲಿ ಚಳಿ ಹೇಗಿರುತ್ತದೆ..?

Share

26.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ರಾಜ್ಯದಾದ್ಯಂತ ಒಣ ಹವೆ ಹಾಗೂ ಉತ್ತರ ಚಳಿಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

ಈಗಿನಂತೆ ಡಿಸೆಂಬರ್ 26ರಿಂದ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ದಿಕ್ಕು ಬದಲಾಗುವ ಕಾರಣದಿಂದ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಪ್ರಮಾಣವು ಸ್ವಲ್ಪ ಕಡಿಮೆಯಾಗುವ ಸಾಧ್ಯತೆಗಳಿದ್ದು, ಡಿಸೆಂಬರ್ 28 ರಿಂದ ದಕ್ಷಿಣದ ಕನ್ಯಾಕುಮಾರಿ ಕಡೆಯಿಂದ ಉತ್ತರಕ್ಕೆ ಗಾಳಿ ಬೀಸಲು ಆರಂಭವಾಗುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಕರಾವಳಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ, ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಈ ವಾತಾವರಣವು 2026 ರ ಜನವರಿ 2 ಅಥವಾ 3ನೇ ತಾರೀಕಿನ ತನಕ ಮುಂದುವರಿಯುವ ಮುನ್ಸೂಚೆನೆ ಇದೆ. ಉತ್ತರ ಒಳನಾಡು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಚಳಿಯು ಕಡಿಮೆಯಾಗಿ ಸಾಮಾನ್ಯ ಚಳಿಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

4 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

4 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

4 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

7 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago