ಜನವರಿ ತಿಂಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದೆ ಎನ್ನುವ ವರದಿ ಈ ಹಿಂದೆ ಬಂದಿತ್ತು. ಇದೀಗ ರಾಜ್ಯದಲ್ಲಿ ಚಳಿಯ ಪ್ರಭಾವ ಕಡಿಮೆಯಾಗಿದೆ. ಆದರೆ ಉತ್ತರ ಭಾರತವನ್ನು ಶೀತದ ಅಲೆಯು ಆವರಿಸಿದೆ, ಬೆಳಿಗ್ಗೆ ದಟ್ಟವಾದ ಮಂಜಿನಿಂದ ಕೂಡಿರಲಿದ್ದು, ಮುಂದಿನ 3-4 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬೆಳಿಗ್ಗೆ ಮತ್ತು ರಾತ್ರಿಯ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣವು ಬಾಧಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.…..ಮುಂದೆ ಓದಿ….
ರಾಜ್ಯದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ತಾಪಮಾನ ಕುಸಿತ ಸಾಧ್ಯತೆ ಇದೆ.ಜನವರಿಯ ಆರಂಭವು ರಾಜ್ಯದಾದ್ಯಂತ ಶೀತ ಹವಾಮಾನವನ್ನು ಉಂಟುಮಾಡಿತ್ತು, ನಂತರ ಇನ್ನಷ್ಟು ಕುಸಿತದ ಸೂಚನೆ ಇತ್ತು. ಆದರೆ ಸದ್ಯ ಚಳಿಯ ಪ್ರಭಾವ ಈಗ ಕಡಿಮೆಯಾಗಿದೆ.
ಭಾರತೀಯ ಹವಾಮಾನ ಇಲಾಖೆಯು ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರ ಮಧ್ಯಪ್ರದೇಶದ ಕೆಲವು ಕಡೆ ಶೀತ ಗಾಳಿಯ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ ಹಾಗೂ ಈಶಾನ್ಯ ರಾಜ್ಯಗಳ ಕೆಲವು ಸ್ಥಳಗಳಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 2 ದಿನಗಳಲ್ಲಿ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
ದಟ್ಟವಾದ ಮಂಜಿನ ಸ್ಥಿತಿಯಿಂದಾಗಿ, ದೇಶದ ಉತ್ತರ ಪ್ರದೇಶದಲ್ಲಿ ಹಲವಾರು ರೈಲುಗಳು ಮತ್ತು ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿತು. ದೆಹಲಿಗೆ ಹೋಗುವ ಸುಮಾರು 25 ರೈಲುಗಳು ಐದರಿಂದ ಆರು ಗಂಟೆಗಳವರೆಗೆ ವಿಳಂಬವಾಗಿವೆ. ಏತನ್ಮಧ್ಯೆ, ಮಂಜಿನಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳು ವಿಳಂಬವಾಗಿವೆ. ಆದರೆ, ಯಾವುದೇ ವಿಮಾನಗಳು ರದ್ದಾಗಿಲ್ಲ.