ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್ ಹಾಗೂ 4 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿಯಾಗಿಲ್ಲ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ. ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel