ಹವಾಮಾನ ವರದಿ | 08-01-2025 | ವಾಯುಭಾರ ಕುಸಿತದ ಲಕ್ಷಣ | ತುಂತುರು ಮಳೆ ಸಾಧ್ಯತೆ | ಈ ವರ್ಷದ ಚಳಿಗಾಲ ಅಂತ್ಯವಾಗುವ ಸಾಧ್ಯತೆ..? |

January 8, 2025
12:28 PM
ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಶ್ರೀಲಂಕಾ ಕರಾವಳಿಗೆ ಜನವರಿ 9 ರಂದು ತಲಪುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಈಗ ಬೀಸುತ್ತಿರುವ ಶೀತ ಗಾಳಿಯು ಕಡಿಮೆಯಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗುವ ಸಾಧ್ಯತೆಗಳಿವೆ. ಜನವರಿ 9 ರಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ.

ಈಗಿನಂತೆ ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರೊಂದಿಗೆ ಈ ಸಾಲಿನ ಚಳಿಗಾಲವು ಅಂತ್ಯವಾಗುವ ಸಾಧ್ಯತೆಯೂ ಇದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror