09.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಶ್ರೀಲಂಕಾ ಕರಾವಳಿಗೆ ಜನವರಿ 9 ರಂದು ತಲಪುವ ನಿರೀಕ್ಷೆಯಿದೆ. ಇದರ ಪ್ರಭಾವದಿಂದ ಉತ್ತರ ಭಾರತ ಕಡೆಯಿಂದ ದಕ್ಷಿಣದ ಕಡೆಗೆ ಈಗ ಬೀಸುತ್ತಿರುವ ಶೀತ ಗಾಳಿಯು ಕಡಿಮೆಯಾಗಿ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಬೀಸಲು ಆರಂಭವಾಗುವ ಸಾಧ್ಯತೆಗಳಿವೆ. ಜನವರಿ 9 ರಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ.
ಈಗಿನಂತೆ ಜನವರಿ 12ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರೊಂದಿಗೆ ಈ ಸಾಲಿನ ಚಳಿಗಾಲವು ಅಂತ್ಯವಾಗುವ ಸಾಧ್ಯತೆಯೂ ಇದೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…