ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಣ

November 15, 2024
11:20 PM

ಜೀವನಶೈಲಿ ಬದಲಾವಣೆ ಮೂಲಕ ಮಧುಮೇಹ ನಿಯಂತ್ರಿಸಬಹುದು ಎಂದು ಸಿಮ್ಸ್ ನಿರ್ದೇಶಕ ಡಾ. ವಿರುಪಾಕ್ಷಪ್ಪ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್‌ಸಿಡಿ ಘಟಕ ವತಿಯಿಂದ ಸಿಮ್ಸ್ ವೈದ್ಯಕೀಯ ಕಾಲೇಜಿನ ಎನ್‌ಸಿಡಿ ಆವರಣದಲ್ಲಿ ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿರು.

ಜಿಲ್ಲಾ ವೈದ್ಯಾಧಿಕಾರಿ ಡಾ.ನಟರಾಜ್ ಮಾತನಾಡಿ, ಮಧುಮೇಹದಿಂದ ಕಿಡ್ನಿ ವೈಫಲ್ಯ, ಹೃದಯ ಸಂಬಂಧಿ ಕಾಯಿಲೆಗಳು, ಪಾರ್ಶ್ವವಾಯು, ನರಗಳಿಗೆ ಹಾನಿಯಾಗುವುದು ಸೇರಿದಂತೆ ಅನೇಕ ಕಾಯಿಲೆಗಳಿಗೆ ಮಧುಮೇಹ ಕಾರಣವಾಗುತ್ತದೆ ಎಂದರು. ಮಧುಮೇಹ ನಿಯಂತ್ರಿಸಲು ಪ್ರತಿನಿತ್ಯ ದೈಹಿಕ ಚಟುವಟಿಕೆ, ಆರೋಗ್ಯಕರ ಆಹಾರ ಸೇವನೆ, ತಾಜಾ ಹಣ್ಣು, ತರಕಾರಿ, ಧಾನ್ಯಗಳನ್ನು ಹೆಚ್ಚಾಗಿ ಸೇವಿಸುವುದು ಮತ್ತು ಮದ್ಯಪಾನ ತ್ಯಜಿಸುವುದು, ದಿನನಿತ್ಯ ನಿಗದಿತ ಚಿಕಿತ್ಸೆ ಪಾಲನೆ, ನಿಯಮಿತ ರಕ್ತದ ಸಕ್ಕರೆ ಪರೀಕ್ಷೆ ಮಾಡಿಸುವ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror